ನವದೆಹಲಿ: ಈ ವರ್ಷದ ‘ಪರೀಕ್ಷಾ ಪೇ ಚರ್ಚಾ’ ಬಗ್ಗೆ ತಮ್ಮ ಅಮೂಲ್ಯವಾದ ಒಳನೋಟಗಳನ್ನು ಹಂಚಿಕೊಂಡಿರುವ ಲಕ್ಷಾಂತರ ಜನರ ಉತ್ಸಾಹವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.
ಪರೀಕ್ಷಾ ಪೇ ಚರ್ಚಾದಲ್ಲಿ ಸಹಕರಿಸಿದ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರಿಗೆ ಅವರು ಕೃತಜ್ಞತೆ ಸಲ್ಲಿಸಿದರು.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ, “ಈ ವರ್ಷದ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದ ಬಗ್ಗೆ ಜನರ ಉತ್ಸಾಹವು ಅಸಾಧಾರಣವಾಗಿದೆ. ಲಕ್ಷಾಂತರ ಜನರು ತಮ್ಮ ಅಮೂಲ್ಯವಾದ ಒಳನೋಟಗಳು ಮತ್ತು ಅನುಭವಗಳನ್ನು ಹಂಚಿಕೊಂಡಿದ್ದಾರೆ. ಕೊಡುಗೆ ನೀಡಿದ ಎಲ್ಲ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರಿಗೆ ನಾನು ಧನ್ಯವಾದಗಳು” ಎಂದಿದ್ದಾರೆ.
ಏಪ್ರಿಲ್ 1 ರಂದು ಜರುಗಲಿರುವ ಕಾರ್ಯಕ್ರಮವನ್ನು ಎದುರು ನೋಡುತ್ತಿದ್ದೇನೆ ಎಂದು ಪ್ರಧಾನಿ ತಿಳಿಸಿದ್ದಾರೆ.
The enthusiasm towards this year’s Pariksha Pe Charcha has been phenomenal. Lakhs of people have shared their valuable insights and experiences. I thank all those students, parents and teachers who have contributed.
Looking forward to the programme on 1st April. https://t.co/nvXedTvh9F
— Narendra Modi (@narendramodi) March 30, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.