ನವದೆಹಲಿ: ಈ ವರ್ಷದ ಅಮರನಾಥ ಯಾತ್ರೆಗೆ ನೋಂದಣಿ ಕಾರ್ಯ ಇಂದಿನಿಂದ ಆರಂಭವಾಗಲಿದೆ. ಹಿಮಾಲಯದ ಗುಹಾ ದೇಗುಲಕ್ಕೆ ಯಾತ್ರೆ ಜೂನ್ 30 ರಂದು ಆರಂಭಗೊಂಡು ಆಗಸ್ಟ್ 11 ರಂದು ಮುಕ್ತಾಯಗೊಳ್ಳಲಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಅಮರನಾಥ ಪುಣ್ಯಕ್ಷೇತ್ರ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಿತೀಶ್ವರ್ ಕುಮಾರ್, ಜಮ್ಮು ಮತ್ತು ಕಾಶ್ಮೀರ ಬ್ಯಾಂಕ್, ಪಂಜಾಬ್ ನ್ಯಾಷನಲ್ ಬ್ಯಾಂಕ್, ಯೆಎಸ್ ಬ್ಯಾಂಕ್ ನ 446 ಶಾಖೆಗಳಲ್ಲಿ ನೋಂದಣಿ ಪ್ರಾರಂಭವಾಗಲಿದೆ ಮತ್ತು ದೇಶಾದ್ಯಂತ SBI ನ 100 ಶಾಖೆಗಳಲ್ಲಿ ನೋಂದಣಿ ಇರಲಿದೆ.
ಯಾತ್ರಾರ್ಥಿಗಳು ದೇಗುಲ ಮಂಡಳಿಯ ವೆಬ್ಸೈಟ್ ಮತ್ತು ಮೊಬೈಲ್ ಅಪ್ಲಿಕೇಶನ್ ಮೂಲಕ ಆನ್ಲೈನ್ನಲ್ಲಿ ನೋಂದಾಯಿಸಿಕೊಳ್ಳಬಹುದು.
ರಾಂಬನ್ ಜಿಲ್ಲೆಯಲ್ಲಿ 3600 ಯಾತ್ರಿಗಳಿಗೆ ಅವಕಾಶ ಕಲ್ಪಿಸುವ ಯಾತ್ರಿ ನಿವಾಸವನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ..
ಅಮರನಾಥ ದೇಗುಲ ಮಂಡಳಿಯು ಈ ವರ್ಷ ಮೂರು ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳಿಂದ ಯಾತ್ರೆಯನ್ನು ನಿರೀಕ್ಷಿಸುತ್ತಿದೆ. ಪಹಲ್ಗಾಮ್ ಮತ್ತು ಬಾಲ್ಟಾಲ್ ಮಾರ್ಗಗಳಿಂದ ಏಕಕಾಲದಲ್ಲಿ ಯಾತ್ರೆಯನ್ನು ಪ್ರಾರಂಭಿಸಲು ಮಂಡಳಿ ನಿರ್ಧರಿಸಿದೆ. ಹೆಲಿಕಾಪ್ಟರ್ನಲ್ಲಿ ಪ್ರಯಾಣಿಸುವವರನ್ನು ಹೊರತುಪಡಿಸಿ ಪ್ರತಿ ಮಾರ್ಗದಲ್ಲಿ ದಿನಕ್ಕೆ 10,000 ಯಾತ್ರಾರ್ಥಿಗಳಿಗೆ ಮಾತ್ರ ಅನುಮತಿಸಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.