ವಾಷಿಂಗ್ಟನ್: ಅಮೆರಿಕ ಪ್ರವಾಸದಲ್ಲಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪಾಕಿಸ್ಥಾನದ ನೂತನ ಪ್ರಧಾನಿ ಶೆಹಬಾಜ್ ಷರೀಫ್ ಅವರಿಗೆ ಶುಭ ಹಾರೈಸಿದ್ದಾರೆ ಮತ್ತು ಅವರ ದೇಶದ ನೆಲದಿಂದ ಹೊರಹೊಮ್ಮುತ್ತಿರುವ ಭಯೋತ್ಪಾದನಾ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತೆ ಒತ್ತಾಯಿಸಿದ್ದಾರೆ.
“ಭಯೋತ್ಪಾದನೆಯನ್ನು ನಿಗ್ರಹಿಸುವಂತೆ ನಾನು ಅವರಿಗೆ ತಿಳಿಸಲು ಬಯಸುತ್ತೇನೆ. ಅವರಿಗೆ ನನ್ನ ಶುಭಾಶಯಗಳು” ಎಂದು ರಾಜನಾಥ್ ಸಿಂಗ್ ಪಾಕಿಸ್ಥಾನದ ನೂತನ ಪ್ರಧಾನಿ ಶೆಹಬಾಜ್ ಷರೀಫ್ ಅವರನ್ನು ಉದ್ದೇಶಿಸಿ ಹೇಳಿದ್ದಾರೆ.
ಸೋಮವಾರ, ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ಥಾನದ 23 ನೇ ಪ್ರಧಾನಿಯಾಗಿ ಆಯ್ಕೆಯಾದ ಶೆಹಬಾಜ್ ಷರೀಫ್ ಅವರನ್ನು ಅಭಿನಂದಿಸಿದರು. ಭಾರತವು ಭಯೋತ್ಪಾದನೆ ಮುಕ್ತ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಬಯಸುತ್ತದೆ, ಇದರಿಂದ ಎರಡೂ ದೇಶಗಳು ತಮ್ಮ ಅಭಿವೃದ್ಧಿ ಸವಾಲುಗಳ ಮೇಲೆ ಗಮನ ಕೇಂದ್ರೀಕರಿಸಬಹುದು ಎಂದಿದ್ದಾರೆ.
“ಪಾಕಿಸ್ಥಾನದ ಪ್ರಧಾನಿಯಾಗಿ ಆಯ್ಕೆಯಾದ ಹೆಚ್.ಇ. ಮಿಯಾನ್ ಮುಹಮ್ಮದ್ ಶೆಹಬಾಜ್ ಷರೀಫ್ ಅವರಿಗೆ ಅಭಿನಂದನೆಗಳು. ಭಾರತವು ಭಯೋತ್ಪಾದನೆ ಮುಕ್ತ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಬಯಸುತ್ತದೆ, ಇದರಿಂದ ನಾವು ನಮ್ಮ ಅಭಿವೃದ್ಧಿ ಸವಾಲುಗಳ ಮೇಲೆ ಕೇಂದ್ರೀಕರಿಸಬಹುದು ಮತ್ತು ನಮ್ಮ ಜನರ ಯೋಗಕ್ಷೇಮ ಮತ್ತು ಸಮೃದ್ಧಿಯನ್ನು ಖಚಿತಪಡಿಸಿಕೊಳ್ಳಬಹುದು” ಎಂದು ಪ್ರಧಾನಿ ಮೋದಿ ಟ್ವೀಟ್ನಲ್ಲಿ ತಿಳಿಸಿದ್ದಾರೆ.
Congratulations to H. E. Mian Muhammad Shehbaz Sharif on his election as the Prime Minister of Pakistan. India desires peace and stability in a region free of terror, so that we can focus on our development challenges and ensure the well-being and prosperity of our people.
— Narendra Modi (@narendramodi) April 11, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.