ನವದೆಹಲಿ: ಭಾರತದಲ್ಲಿ ಹೆಚ್ಚುತ್ತಿರುವ ಕೋವಿಡ್ -19 ಸೋಂಕುಗಳ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮುಖ್ಯಮಂತ್ರಿಗಳೊಂದಿಗೆ ಸಂವಾದ ನಡೆಸಿ, ದೇಶದಲ್ಲಿನ ಕೊರೋನಾವೈರಸ್ ಪರಿಸ್ಥಿತಿಯ ಕುರಿತು ಪರಿಶೀಲನೆ ನಡೆಸಿದರು.
ವರ್ಚುವಲ್ ಸಂವಾದದ ಸಂದರ್ಭದಲ್ಲಿ ಮೋದಿ, ವೈರಸ್ನ ಬೆದರಿಕೆ ಇನ್ನೂ ಸಂಪೂರ್ಣವಾಗಿ ಹೋಗಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದಿದ್ದಾರೆ.
ಎಲ್ಲಾ ಅರ್ಹ ಮಕ್ಕಳಿಗೆ ಕೋವಿಡ್ -19 ಲಸಿಕೆಯನ್ನು ಶೀಘ್ರವಾಗಿ ನೀಡುವುದು ಸರ್ಕಾರದ ಆದ್ಯತೆಯಾಗಿದೆ ಮತ್ತು ಅದಕ್ಕಾಗಿ ವಿಶೇಷ ಕಾರ್ಯಕ್ರಮಗಳನ್ನು ಶಾಲೆಗಳಲ್ಲಿ ನಡೆಸಬೇಕಾಗಿದೆ ಎಂದು ಅವರು ಹೇಳಿದರು.
ಕೆಲವು ರಾಜ್ಯಗಳಲ್ಲಿ ಕೋವಿಡ್ -19 ಸೋಂಕುಗಳ ಇತ್ತೀಚಿನ ಹೆಚ್ಚಳವನ್ನು ಉಲ್ಲೇಖಿಸಿದ ಮೋದಿ ಎಚ್ಚರಿಕೆಯ ಅಗತ್ಯವಿದೆ ಎಂದು ಹೇಳಿದರು.
“ನಮ್ಮ ವಿಜ್ಞಾನಿಗಳು ಮತ್ತು ತಜ್ಞರು ರಾಷ್ಟ್ರೀಯ ಮತ್ತು ಜಾಗತಿಕ ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಅವರ ಸಲಹೆಗಳನ್ನು ಸಾಮೂಹಿಕ ವಿಧಾನದೊಂದಿಗೆ ನಾವು ಕಾರ್ಯಗತ ಮಾಡಬೇಕು” ಎಂದಿದ್ದಾರೆ.
“ನಾವು ಟೆಸ್ಟ್, ಟ್ರ್ಯಾಕ್ ಮತ್ತು ಟ್ರೀಟ್ನ ನಮ್ಮ ಕಾರ್ಯತಂತ್ರವನ್ನು ಸಮಾನವಾಗಿ ಪರಿಣಾಮಕಾರಿಯಾಗಿ ಕಾರ್ಯಗತಗೊಳಿಸಬೇಕಾಗಿದೆ. ಪ್ರಸ್ತುತ ಕೊರೊನಾವೈರಸ್ ಪರಿಸ್ಥಿತಿಯಲ್ಲಿ, ಗಂಭೀರವಾದ ಇನ್ಫ್ಲುಯೆನ್ಝ ಪ್ರಕರಣಗಳ ಆಸ್ಪತ್ರೆಗಳಲ್ಲಿ ದಾಖಲಾದ ರೋಗಿಗಳಿಗೆ ನಾವು 100 ಪ್ರತಿಶತ ಆರ್ಟಿ-ಪಿಸಿಆರ್ ಪರೀಕ್ಷೆಯನ್ನು ಮಾಡುವುದು ಅವಶ್ಯಕ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಈ ನಿಟ್ಟಿನಲ್ಲಿ ಪಾಲಕರು ಹಾಗೂ ಮಕ್ಕಳಲ್ಲಿ ಅರಿವು ಅತೀ ಅಗತ್ಯವಾಗಿದೆ ಎಂದರು.
ವೈದ್ಯಕೀಯ ಕಾಲೇಜುಗಳು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಮೂಲಸೌಕರ್ಯ ಮತ್ತು ಮಾನವಶಕ್ತಿಯನ್ನು ಹೆಚ್ಚಿಸಲು ಪ್ರಧಾನಿ ಮೋದಿ ಕರೆ ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.