ನವದೆಹಲಿ: ಭಾರತದ ಕೋವಿಡ್ ವ್ಯಾಕ್ಸಿನೇಷನ್ ಕಾರ್ಯಕ್ರಮ ಮಹತ್ವದ ಬೆಳವಣಿಗೆಯನ್ನು ಸಾಧಿಸುತ್ತಿದೆ, 12-14 ವಯಸ್ಸಿನ 60% ಕ್ಕಿಂತ ಹೆಚ್ಚು ಯುವಕರು 1 ನೇ ಡೋಸ್ ಲಸಿಕೆಯನ್ನು ಪಡೆದಿದ್ದಾರೆ.
ಸಚಿವ ಮನ್ಸುಖ್ ಮಾಂಡವಿಯಾ ಅವರು ಶನಿವಾರ ಟ್ವೀಟ್ ಮಾಡಿ, “12-14 ವಯೋಮಾನದ 60% ಕ್ಕಿಂತ ಹೆಚ್ಚು ಯುವಕರು ಕೋವಿಡ್-19 ಲಸಿಕೆಯ 1 ನೇ ಡೋಸ್ ಅನ್ನು ಸ್ವೀಕರಿಸಿದ್ದಾರೆ. ಲಸಿಕೆಯನ್ನು ಪಡೆದ ನನ್ನ ಎಲ್ಲಾ ಯುವ ಸ್ನೇಹಿತರಿಗೆ ಅಭಿನಂದನೆಗಳು. ನಾವೆಲ್ಲರೂ ನಿಮ್ಮ ಬಗ್ಗೆ ಹೆಮ್ಮೆಪಡುತ್ತೇವೆ! ಇದನ್ನು ಮುಂದುವರಿಸೋಣ” ಎಂದಿದ್ದಾರೆ.
ತಾತ್ಕಾಲಿಕ ವರದಿಯ ಪ್ರಕಾರ ಇಂದು ಬೆಳಿಗ್ಗೆ 7 ಗಂಟೆಯವರೆಗೆ 15-18 ವರ್ಷ ವಯಸ್ಸಿನ 5,84,25,991 ಮಂದಿಗೆ ಮೊದಲ ಡೋಸ್ ಲಸಿಕೆಗಳನ್ನು ಮತ್ತು 4,22,40,428 ಮಂದಿಗೆ ಎರಡನೇ ಡೋಸ್ಗಳನ್ನು ನೀಡಲಾಗಿದೆ.
ರಾಷ್ಟ್ರವ್ಯಾಪಿ ಕೋವಿಡ್-19 ಲಸಿಕೆಯನ್ನು 16 ಜನವರಿ 2021 ರಂದು ಪ್ರಾರಂಭಿಸಲಾಯಿತು. ಕೋವಿಡ್-19 ಲಸಿಕೆಯ ಸಾರ್ವತ್ರಿಕರಣದ ಹೊಸ ಹಂತವವನ್ನು 21 ಜೂನ್ 2021 ರಂದು ಪ್ರಾರಂಭಿಸಲಾಯಿತು.
ರಾಷ್ಟ್ರವ್ಯಾಪಿ ಲಸಿಕಾ ಅಭಿಯಾನದ ಭಾಗವಾಗಿ, ಭಾರತ ಸರ್ಕಾರವು ರಾಜ್ಯಗಳು ಮತ್ತು ಕೇಂದ್ರಾಡಳಿತಗಳಿಗೆ ಕೋವಿಡ್ ಲಸಿಕೆಗಳನ್ನು ಉಚಿತವಾಗಿ ನೀಡುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.