ನವದೆಹಲಿ: ಇತ್ತೀಚಿಗೆ ಟ್ವಿಟರ್ ಅನ್ನು $44 ಬಿಲಿಯನ್ಗೆ ಖರೀದಿಸಿದ್ದ ಎಲಾನ್ ಮಸ್ಕ್ ಅವರು ಇದೀಗ ಟ್ವಿಟರ್ ಎಲ್ಲರಿಗೂ ಉಚಿತವಾಗಿರುವುದಿಲ್ಲ ಎಂಬ ಸೂಚನೆ ನೀಡಿದ್ದಾರೆ.
ಟ್ವಿಟರ್ ಸಾಮಾನ್ಯ ಬಳಕೆದಾರರಿಗೆ ಯಾವಾಗಲೂ ಉಚಿತವಾಗಿರುತ್ತದೆ. ಆದರೆ ವಾಣಿಜ್ಯ ಮತ್ತು ಸರ್ಕಾರಿ ಬಳಕೆದಾರರು ಶುಲ್ಕ ನೀಡಬೇಕಾಗಬಹುದು ಎಂದು ಮಸ್ಕ್ ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಟ್ವಟರ್ ಖರೀದಿಸಿದ ನಂತರ ಮಸ್ಕ್ ಅವರು ಹೊಸ ವೈಶಿಷ್ಟ್ಯಗಳೊಂದಿಗೆ ಟ್ವಿಟ್ಟರ್ನಲ್ಲಿ ಕೆಲ ಬದಲಾವಣೆ ಮಾಡಲು ಮುಂದಾಗಿದ್ದಾರೆ. ಇದಲ್ಲದೆ, ಟ್ವಿಟರ್ಗೆ ಹೊಸ ಮುಖ್ಯ ಕಾರ್ಯನಿರ್ವಾಹಕರನ್ನು ನೇಮಿಸುವ ಸಾಧ್ಯತೆ ಇದೆ ಎಂದೂ ಹೇಳಲಾಗಿದೆ. ಈ ವರ್ಷದ ಕೊನೆಯಲ್ಲಿ ಟ್ವಿಟ್ಟರ್ ಮಾರಾಟದ ಒಪ್ಪಂದ ಪೂರ್ಣಗೊಳಿಸಿದ ನಂತರ ಭಾರತೀಯ ಮೂಲದ ಪರಾಗ್ ಅಗರವಾಲ್ ಅವರನ್ನು ಸಿಇಒ ಸ್ಥಾನದಿಂದ ಬದಲಾಯಿಸುವ ಸಾಧ್ಯತೆ ದಟ್ಟವಾಗಿದೆ.
ಟ್ವಿಟರ್ನ ಕಾನೂನು ಮುಖ್ಯಸ್ಥ ವಿಜಯ ಗಡ್ಡೆರನ್ನು ವಜಾ ಮಾಡಲು ಎಲಾನ್ ಮಸ್ಕ್ ಯೋಜಿಸಿದ್ದಾರೆ ಎಂದೂ ವರದಿಯಾಗಿದೆ. ಕಳೆದ ತಿಂಗಳು ಟ್ವಿಟರ್ನೊಂದಿಗೆ ಒಪ್ಪಂದ ಮಾಡಿಕೊಳ್ಳುವ ಮೊದಲು ಎಲಾನ್ ಮಸ್ಕ್, ಟ್ವಿಟರ್ ಬ್ಲೂ ಪ್ರೀಮಿಯಂ ಚಂದಾದಾರಿಕೆ ಸೇವೆಗೆ ಅದರ ಬೆಲೆ ಕಡಿತಗೊಳಿಸುವುದೂ ಸೇರಿದಂತೆ ಕೆಲವು ಬದಲಾವಣೆಗಳನ್ನು ಸೂಚಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.