ಉಡುಪಿ: ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಪ್ರಮೋದ್ ಮಧ್ವರಾಜ್ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಮೂಲಗಳ ಪ್ರಕಾರ ಅವರು ಶೀಘ್ರದಲ್ಲೇ ಬಿಜೆಪಿ ಸೇರಲಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಅವರು, ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದಾರೆ.
ಉಡುಪಿ ಜಿಲ್ಲೆಯ ಕಾಂಗ್ರೆಸ್ ನಲ್ಲಿ ನನಗೆ ಮುಂದುವರಿಯಲು ಸಾಧ್ಯವಾಗದ ವಾತಾವರಣವಿದೆ. ನಾನು ಈ ಬಗ್ಗೆ ವಿಷಾದ ವ್ಯಕ್ತಪಡಿಸುತ್ತೇನೆ. ಇತ್ತೀಚಿಗೆ ನನಗೆ ಕೆಪಿಸಿಸಿ ಉಪಾಧ್ಯಕ್ಷನನ್ನಾಗಿ ನೇಮಿಸಿದ್ದೀರಿ ಅದಕ್ಕಾಗಿ ಧನ್ಯವಾದಗಳು, ಆದರೆ ನಾನು ಅದನ್ನು ಒಪ್ಪಿಕೊಳ್ಳುವುದಿಲ್ಲ, ಕಾಂಗ್ರೆಸ್ ಪಕ್ಷದಲ್ಲಿ ಮುಂದುವರಿಯಲು ಸಾಧ್ಯವಾಗುತ್ತಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಕಳೆದ ಮೂರು ವರ್ಷಗಳಿಂದ ಉಡುಪಿ ಜಿಲ್ಲಾ ಕಾಂಗ್ರೆಸ್ ಪಕ್ಷದಲ್ಲಿ ರಾಜಕೀಯ ಉಸಿರುಗಟ್ಟುವಿಕೆಗೆ ಕಾರಣವಾದ ಪರಿಸ್ಥಿತಿಯು ನನಗೆ ಕೆಟ್ಟ ಅನುಭವವಾಗಿದೆ ಎಂದಿದ್ದಾರೆ.
ಉಡುಪಿ ಜಿಲ್ಲಾ ಕಾಂಗ್ರೆಸ್ ಪಕ್ಷದಲ್ಲಿನ ಪ್ರಚಲಿತ ಪರಿಸ್ಥಿತಿಯ ಬಗ್ಗೆ ನನ್ನ ಅಸಮಾಧಾನವನ್ನು ನಿವಾರಿಸಲು ಪಕ್ಷದಿಂದ ಯಾವುದೇ ಪ್ರಯೋಜನಕಾರಿ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿಲ್ಲ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.