ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಧಿಕಾರ ವಹಿಸಿಕೊಂಡ ದಕ್ಷಿಣ ಕೊರಿಯಾದ ನೂತನ ಅಧ್ಯಕ್ಷ ಯೂನ್ ಸುಕ್-ಯೋಲ್ ಅವರಿಗೆ ಹೃತ್ಪೂರ್ವಕ ಶುಭಾಶಯಗಳು ಮತ್ತು ಅಭಿನಂದನೆಗಳನ್ನು ತಿಳಿಸಿದ್ದಾರೆ.
ಶೀಘ್ರದಲ್ಲೇ ಅವರನ್ನು ಭೇಟಿ ಮಾಡಲು ಮತ್ತು ಉಭಯ ರಾಷ್ಟ್ರಗಳ ಸಂಬಂಧಗಳನ್ನು ಬಲಪಡಿಸಲು ಮತ್ತು ಸಮೃದ್ಧಗೊಳಿಸುವ ನಿಟ್ಟಿನಲ್ಲಿ ಒಟ್ಟಾಗಲು ಪ್ರಧಾನಿ ಮೋದಿ ತಮ್ಮ ಉತ್ಸುಕತೆಯನ್ನು ವ್ಯಕ್ತಪಡಿಸಿದ್ದಾರೆ.
“ಇಂದು ಯೂನ್ ಸುಕ್-ಯೋಲ್ ಅವರು ತಮ್ಮ ಅಧಿಕಾರಾವಧಿಯನ್ನು ಪ್ರಾರಂಭಿಸುತ್ತಿರುವ ಹಿನ್ನೆಲೆಯಲ್ಲಿ ನಾನು ಅವರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಮತ್ತು ಶುಭ ಹಾರೈಕೆಗಳನ್ನು ತಿಳಸುತ್ತೇವೆ. ನಾನು ಶೀಘ್ರದಲ್ಲೇ ಅವರನ್ನು ಭೇಟಿಯಾಗಲು ಎದುರು ನೋಡುತ್ತಿದ್ದೇನೆ ಮತ್ತು ಭಾರತ-ದಕ್ಷಿಣ ಕೊರಿಯಾ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ಮತ್ತು ಉತ್ಕೃಷ್ಟಗೊಳಿಸಲು ಒಟ್ಟಾಗಿ ಕೆಲಸ ಮಾಡುತ್ತೇನೆ” ಎಂದಿದ್ದಾರೆ.
ಮಾರ್ಚ್ 17 ರಂದು ಪ್ರಧಾನಿ ಮೋದಿ ಅವರು ಹೊಸದಾಗಿ ಆಯ್ಕೆಯಾದ ಯೂನ್ ಸುಕ್-ಯೋಲ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು. ದಕ್ಷಿಣ ಕೊರಿಯಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವಿಗಾಗಿ ಅಭಿನಂದಿಸಿದರು. ಭಾರತ-ಕೊರಿಯಾದ ವಿಶೇಷ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸುವುದು ಅತ್ಯಗತ್ಯ ಎಂದು ಎರಡೂ ಕಡೆಯವರು ಒಪ್ಪಿಕೊಂಡಿದ್ದಾರೆ.
ಆದಷ್ಟು ಬೇಗ ಭಾರತಕ್ಕೆ ಭೇಟಿ ನೀಡುವಂತೆ ಯೂನ್ ಸುಕ್-ಯೋಲ್ ಅವರಿಗೆ ಪ್ರಧಾನಿ ಮೋದಿ ಆಹ್ವಾನ ನೀಡಿದ್ದಾರೆ. 2023 ರಲ್ಲಿ ಭಾರತ ಮತ್ತು ದಕ್ಷಿಣ ಕೊರಿಯಾ ನಡುವಿನ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 50 ನೇ ವಾರ್ಷಿಕೋತ್ಸವವನ್ನು ಸ್ಮರಿಸುವ ಬಯಕೆಯನ್ನು ಇಬ್ಬರೂ ವ್ಯಕ್ತಪಡಿಸಿದ್ದಾರೆ.
I extend my heartfelt greetings and good wishes to ROK President @sukyeol__yoon as he commences his term in office today. I look forward to meeting him soon and working together to further strengthen and enrich the India-ROK ties.
— Narendra Modi (@narendramodi) May 10, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.