ನವದೆಹಲಿ: ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಮಂಗಳವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ಪರಮ ವಿಶಿಷ್ಟ ಸೇವಾ ಪದಕವನ್ನು ಸ್ವೀಕರಿಸಿದರು.
1960 ರಲ್ಲಿ ಸ್ಥಾಪಿತವಾದ ಪರಮ ವಿಶಿಷ್ಟ ಸೇವಾ ಪದಕವನ್ನು ಭಾರತೀಯ ಸಶಸ್ತ್ರ ಪಡೆಗಳ ಎಲ್ಲಾ ಶ್ರೇಣಿಗಳಿಗೆ ಅತ್ಯಂತ ಅಸಾಧಾರಣ ಸೇವೆಯನ್ನು ಗುರುತಿಸಿ ನೀಡಲಾಗುತ್ತದೆ.
ಜನರಲ್ ಎಂಎಂ ನರವಾಣೆ ಅವರು ಸೇವೆಯಿಂದ ನಿವೃತ್ತರಾದ ನಂತರ ಜನರಲ್ ಮನೋಜ್ ಪಾಂಡೆ ಕಳೆದ ತಿಂಗಳು ಸೇನೆಯ 29 ನೇ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡರು. ಸೇನೆಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದ ಜನರಲ್ ಪಾಂಡೆ, ಕಾರ್ಪ್ಸ್ ಆಫ್ ಇಂಜಿನಿಯರ್ಸ್ನ ಮೊದಲ ಅಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಸೇನೆಯ ಉಪ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು, ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶ ವಲಯಗಳಲ್ಲಿ ನೈಜ ನಿಯಂತ್ರಣ ರೇಖೆಯನ್ನು (ಎಲ್ಎಸಿ) ಕಾಪಾಡುವ ಜವಾಬ್ದಾರಿಯನ್ನು ಹೊಂದಿರುವ ಪೂರ್ವ ಸೇನಾ ಕಮಾಂಡ್ನ ಮುಖ್ಯಸ್ಥರಾಗಿದ್ದರು.
ಚೀನಾ ಮತ್ತು ಪಾಕಿಸ್ತಾನದೊಂದಿಗಿನ ಗಡಿ ಸೇರಿದಂತೆ ಭಾರತವು ಅಸಂಖ್ಯಾತ ಭದ್ರತಾ ಸವಾಲುಗಳನ್ನು ಎದುರಿಸುತ್ತಿರುವ ಸಮಯದಲ್ಲಿ ಜನರಲ್ ಪಾಂಡೆ ಅವರು ಸೇನೆಯ ಉಸ್ತುವಾರಿ ವಹಿಸಿಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.