ಬೆಂಗಳೂರು: ಮೇ 11- ಕಳೆದ ಜುಲೈನಲ್ಲಿ ಪಲ್ವಾಮಾದಲ್ಲಿ ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಯೋಧ ವಿಜಯಪುರ ಜಿಲ್ಲೆಯ ಕಾಶಿರಾಯ ಬಮ್ಮನಳ್ಳಿ ಅವರಿಗೆ ಮರಣೋತ್ತರವಾಗಿ ಶೌರ್ಯ ಚಕ್ರ ಪ್ರಶಸ್ತಿ ನೀಡಿ ಗೌರವಿಸಿರುವುದು ಹೆಮ್ಮೆಯ ಸಂಗತಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ
ಕನ್ನಡಿಗ ಯೋಧನೊಬ್ಬ ಪಡೆದಿರುವ ಅತ್ಯುನ್ನತ ಪ್ರಶಸ್ತಿ ಇದಾಗಿದ್ದು, ಬಮ್ಮನಳ್ಳಿ ಅವರ ಶೌರ್ಯ, ಸಾಹಸ, ಬಲಿದಾನ ಗಳಿಗೆ ಸಂದ ಗೌರವ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯ ಪಟ್ಟಿದ್ದಾರೆ
ಬಮ್ಮನಳ್ಳಿ ಅವರ ಕುಟುಂಬಕ್ಕೆ ಸರ್ಕಾರ ನಿಯಮಾನುಸಾರ ಎಲ್ಲ ರೀತಿಯ ಬೆಂಬಲ ನೀಡಲಿದೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.