ನವದೆಹಲಿ: ಇಂದು ವಿಶ್ವ ದಾದಿಯರ ದಿನ. ನಮ್ಮ ಜಗತ್ತನ್ನು ಆರೋಗ್ಯವಾಗಿಡುವಲ್ಲಿ ಪ್ರಮುಖ ಪಾತ್ರ ವಹಿಸಿರುವ ದಾದಿಯರನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.
1854ರ ಕ್ರೈಮನ್ ಯುದ್ಧದಲ್ಲಿ ಗಾಯಗೊಂಡವರನ್ನು ಉಪಚರಿಸುವಲ್ಲಿ ಅಸಾಧಾರಣ ಸೇವೆ ಸಲ್ಲಿಸಿದ ಫ್ಲಾರೆನ್ಸ್ ನೈಟಿಂಗಲ್ ಅವರ ಜನ್ಮದಿನ. ಮೇ 12 ಅನ್ನು ಪ್ರತಿ ವರ್ಷ ವಿಶ್ವ ದಾದಿಯರ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ.
ಅಂತರಾಷ್ಟ್ರೀಯ ದಾದಿಯರ ದಿನದ ಸಂದರ್ಭದಲ್ಲಿ ಟ್ವಿಟ್ ಮಾಡಿರುವ ಪ್ರಧಾನಿ, “ನಮ್ಮ ಭೂಮಿಯನ್ನು ಆರೋಗ್ಯವಾಗಿಡುವಲ್ಲಿ ದಾದಿಯರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಅವರ ಸಮರ್ಪಣೆ ಮತ್ತು ಸಹಾನುಭೂತಿ ಅನುಕರಣೀಯವಾಗಿದೆ. ಅತ್ಯಂತ ಸವಾಲಿನ ಸಂದರ್ಭಗಳಲ್ಲಿಯೂ ಅವರ ಅಸಾಧಾರಣ ಕೆಲಸಕ್ಕಾಗಿ ಅಂತರರಾಷ್ಟ್ರೀಯ ದಾದಿಯರ ದಿನವು ಎಲ್ಲಾ ಶುಶ್ರೂಷಾ ಸಿಬ್ಬಂದಿಗೆ ಮೆಚ್ಚುಗೆಯನ್ನು ಪುನರುಚ್ಚರಿಸುವ ದಿನವಾಗಿದೆ” ಎಂದಿದ್ದಾರೆ.
ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಟ್ವೀಟ್ ಮಾಡಿ, “ಅಂತರರಾಷ್ಟ್ರೀಯ ದಾದಿಯರ ದಿನದಂದು, ಕೋವಿಡ್-19 ವಿರುದ್ಧ ಸ್ಪೂರ್ತಿದಾಯಕ ಸೇವೆಗಳು ಮತ್ತು ಉತ್ಸಾಹಭರಿತ ಹೋರಾಟಕ್ಕಾಗಿ ನಾನು ಎಲ್ಲಾ ದಾದಿಯರಿಗೆ ನನ್ನ ಆಳವಾದ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ” ಎಂದಿದ್ದಾರೆ.
Nurses play a vital role in keeping our planet healthy. Their dedication and compassion is exemplary. International Nurses Day is a day to reiterate our appreciation to all nursing staff for their exceptional work even in the most challenging of situations.
— Narendra Modi (@narendramodi) May 12, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.