ನವದೆಹಲಿ: ಥಾಮಸ್ ಕಪ್ 2022ರಲ್ಲಿ ಭಾರತೀಯ ಪುರುಷರ ಬ್ಯಾಡ್ಮಿಂಟನ್ ತಂಡವು ಇಂಡೋನೇಷ್ಯಾವನ್ನು 3-0 ಅಂತರದಿಂದ ಸೋಲಿಸಿ ಐತಿಹಾಸಿಕ ಚಿನ್ನದ ಪದಕವನ್ನು ಜಯಿಸಿದೆ.
ಥಾಯ್ಲೆಂಡ್ನ ಬ್ಯಾಂಕಾಕ್ನ ಇಂಪ್ಯಾಕ್ಟ್ ಅರೆನಾದಲ್ಲಿ ನಡೆದ ಥಾಮಸ್ ಕಪ್ 2022 ರ ಫೈನಲ್ನಲ್ಲಿ ಭಾರತ ಪುರುಷರ ಬ್ಯಾಡ್ಮಿಂಟನ್ ತಂಡವು ಭಾನುವಾರ ಇತಿಹಾಸವನ್ನು ಬರೆಯಿತು ಮತ್ತು 14 ಬಾರಿ ವಿಜೇತರಾದ ಇಂಡೋನೇಷ್ಯಾವನ್ನು 3-0 ಅಂತರದಿಂದ ಸೋಲಿಸಿತು.
ಇದರೊಂದಿಗೆ ಭಾರತ ಥಾಮಸ್ ಕಪ್ ಚಾಂಪಿಯನ್ ಪಟ್ಟ ಅಲಂಕರಿಸಿದ ಆರನೇ ರಾಷ್ಟ್ರವಾಯಿತು.
ಲಕ್ಷ್ಯ ಸೇನ್, ಕಿಡಂಬಿ ಶ್ರೀಕಾಂತ್ ಮತ್ತು ಡಬಲ್ಸ್ ಜೋಡಿ ಸಾತ್ವಿಕ್ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಅವರು ಇತಿಹಾಸ ನಿರ್ಮಾಣಕ್ಕೆ ಕಾರಣರಾಗಿದ್ದಾರೆ.
ಆಟಗಾರರ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿ ಟ್ವಿಟ್ ಮೂಲಕ ಕೊಂಡಾಡಿದ್ದಾರೆ.
“ಭಾರತ ಬ್ಯಾಡ್ಮಿಂಟನ್ ತಂಡ ಇತಿಹಾಸ ಬರೆದಿದೆ! ಥೋಮಸ್ ಕಪ್ ಗೆದ್ದ ಭಾರತೀಯ ಆಟಗಾರರಿಂದ ಇಡೀ ದೇಶವೇ ಸಂಭ್ರಮಿಸಿದೆ! ನಮ್ಮ ನಿಪುಣ ತಂಡಕ್ಕೆ ಅಭಿನಂದನೆಗಳು ಮತ್ತು ಅವರ ಮುಂದಿನ ಪ್ರಯತ್ನಗಳಿಗಾಗಿ ಅವರಿಗೆ ಶುಭಾಶಯಗಳು. ಈ ಗೆಲುವು ಮುಂಬರುವ ಹಲವು ಕ್ರೀಡಾ ಪಟುಗಳಿಗೆ ಪ್ರೇರಣೆ ನೀಡಲಿದೆ” ಎಂದಿದ್ದಾರೆ.
The Indian badminton team has scripted history! The entire nation is elated by India winning the Thomas Cup! Congratulations to our accomplished team and best wishes to them for their future endeavours. This win will motivate so many upcoming sportspersons.
— Narendra Modi (@narendramodi) May 15, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.