ಅಬುಧಾಬಿ: ಕಳೆದ ಶುಕ್ರವಾರ ನಿಧನರಾದ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರಿಗೆ ಗೌರವ ಸಲ್ಲಿಸಲು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಭಾನುವಾರ ಯುಎಇ ತಲುಪಿದ್ದಾರೆ.
“ಯುಎಇಯ ದಿವಂಗತ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರಿಗೆ ಗೌರವ ಸಲ್ಲಿಸಲು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಅಬುಧಾಬಿಗೆ ಬಂದಿಳಿದಿದ್ದಾರೆ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕೃತ ವಕ್ತಾರ ಅರಿಂದಮ್ ಬಾಗ್ಚಿ ಟ್ವೀಟ್ ಮಾಡಿದ್ದಾರೆ.
ಶುಕ್ರವಾರ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಭಾರತದ ಸಂತಾಪವನ್ನು ತಿಳಿಸಲು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಭಾನುವಾರ ನವದೆಹಲಿಯಲ್ಲಿರುವ ಯುಎಇ ರಾಯಭಾರ ಕಚೇರಿಗೆ ಭೇಟಿ ನೀಡಿದರು. ಭಾರತ ಅವರ ನಿಧನದ ಅಂಗವಾಗಿ ಶನಿವಾರ ರಾಷ್ಟ್ರೀಯ ಶೋಕಾಚರಣೆಯ ದಿನವನ್ನು ಆಚರಿಸಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.