ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಸಂಜೆ ಲಕ್ನೋದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಯುಪಿ ಸರ್ಕಾರದ ಇತರ ಸಚಿವರೊಂದಿಗೆ ವಿಸ್ತ್ರತ ಸಂವಾದ ನಡೆಸಿದರು.
ಉತ್ತಮ ಆಡಳಿತ ಮತ್ತು ನಾಗರಿಕರಿಗೆ ಸುಲಭವಾದ ಜೀವನ ನಿರ್ವಹಣೆಗೆ ಸಂಬಂಧಿಸಿದಂತೆ ವ್ಯಾಪಕ ಶ್ರೇಣಿಯ ವಿಷಯಗಳನ್ನು ಚರ್ಚಿಸಿದ್ದೇನೆ ಎಂದು ಮೋದಿ ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಲಕ್ನೋಗೆ ಬರುವ ಮೊದಲು, ಮೋದಿ ಅವರು ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯ ಮಹಾನಿರ್ವಾಣ ಸ್ತೂಪದಲ್ಲಿ ಬುದ್ಧ ಪೂರ್ಣಿಮೆಯ ಸಂದರ್ಭದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಭಗವಾನ್ ಬುದ್ಧನ ವಿಗ್ರಹವನ್ನು ಹೊಂದಿರುವ ಈ ದೇವಾಲಯವು ಬುದ್ಧನು ನಿರ್ವಾಣವನ್ನು ಪಡೆದ ಸ್ಥಳವೆಂದು ಹೇಳಲಾಗುತ್ತದೆ.
ನೇಪಾಳದ ಲುಂಬಿನಿಗೆ ಒಂದು ದಿನದ ಭೇಟಿಯಿಂದ ಹಿಂದಿರುಗಿದ ನಂತರ ಪ್ರಧಾನಿ ಇಲ್ಲಿಗೆ ಆಗಮಿಸಿದರು.
ನೇಪಾಳ ಭೇಟಿಯ ಸಂದರ್ಭದಲ್ಲಿ, ಪ್ರಧಾನಿ ಮೋದಿ ನೇಪಾಳದ ಪಿಎಂ ಶೇರ್ ಬಹದ್ದೂರ್ ದೇವುಬಾ ಅವರೊಂದಿಗೆ ಬುದ್ಧನ ಜನ್ಮಸ್ಥಳವಾದ ಲುಂಬಿನಿಯಲ್ಲಿ ತಾಂತ್ರಿಕವಾಗಿ ಸುಧಾರಿತ ಬೌದ್ಧ ಸಂಸ್ಕೃತಿ ಮತ್ತು ಪರಂಪರೆಯ ಭಾರತ ಅಂತರರಾಷ್ಟ್ರೀಯ ಕೇಂದ್ರಕ್ಕೆ ಅಡಿಪಾಯ ಹಾಕಿದರು.
ಲುಂಬಿನಿಯಲ್ಲಿರುವ ಪವಿತ್ರ ಮಾಯಾ ದೇವಿ ದೇವಸ್ಥಾನದಲ್ಲಿ ಮೋದಿ ಪ್ರಾರ್ಥನೆ ಸಲ್ಲಿಸಿದರು.
Had an extensive interaction with the Council of Ministers of the Uttar Pradesh government. We discussed a wide range of subjects relating to furthering good governance and ‘Ease of Living’ for the citizens. pic.twitter.com/NdiYeVS05N
— Narendra Modi (@narendramodi) May 16, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.