ಒಟ್ಟಾವ: ಭಾರತೀಯ ಮೂಲದ ಕೆನಡಾದ ಸಂಸದರೊಬ್ಬರು ಕೆನಡಾದ ಸಂಸತ್ತಿನಲ್ಲಿ ಕನ್ನಡದಲ್ಲಿ ಭಾಷಣ ಮಾಡುವ ಮೂಲಕ ಕನ್ನಡಿಗರ ಹೃದಯವನ್ನು ಗೆದ್ದಿದ್ದಾರೆ.
ಕರ್ನಾಟಕ ಮೂಲದವರಾದ ಚಂದ್ರ ಆರ್ಯ ಅವರು ತಮ್ಮ ಮಾತೃಭಾಷೆ ಕನ್ನಡದ ಕಂಪನ್ನು ಕೆನಡಾದಲ್ಲೂ ಪಸರಿಸಿದ್ದಾರೆ.
ಟ್ವೀಟ್ ಮಾಡಿರುವ ಅವರು, “ಕೆನಡಿಯನ್ ಸಂಸತ್ತಿನಲ್ಲಿ ನನ್ನ ಮಾತೃಭಾಷೆ ಕನ್ನಡದಲ್ಲಿ ಮಾತನಾಡಿದೆ. ಇದು ಸುದೀರ್ಘ ಇತಿಹಾಸ ಹೊಂದಿರುವ ಅತ್ಯಂತ ಸುಂದರ ಭಾಷೆ ಮತ್ತು ಇದನ್ನು ಸುಮಾರು 50 ಮಿಲಿಯನ್ ಜನರು ಮಾತನಾಡುತ್ತಾರೆ. ಭಾರತದ ಹೊರಗಡೆ ಯಾವುದೇ ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡುತ್ತಿರುವುದು ಇದೇ ಮೊದಲು” ಎಂದಿದ್ದಾರೆ. ಅಲ್ಲದೆ ತಾವು ಮಾತನಾಡಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ.
ತಮ್ಮ ಭಾಷಣದ ಸಂದರ್ಭದಲ್ಲಿ ಅವರು, ರಾಷ್ಟ್ರಕವಿ ಕುವೆಂಪು ಬರೆದಿರುವ ಎಲ್ಲಾದರೂ ಇರು ಎಂತಾದರು ಇರು ಎಂದೆಂದಿಗೂ ನೀ ಕನ್ನಡವಾಗಿರು ಎಂಬ ಹಾಡನ್ನು ಹೇಳಿದ್ದಾರೆ.
ಚಂದ್ರ ಆರ್ಯ ಅವರು ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದ್ವಾರಾಳು 2019ರಲ್ಲಿ ಕೆನಡಾದ ನೀತಿಯನ್ ಕ್ಷೇತ್ರದಿಂದ ಎರಡನೇ ಬಾರಿಗೆ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.