ಬೆಂಗಳೂರು: ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಇತಿಹಾಸ ವಿಷಯದ ಪಠ್ಯಪುಸ್ತಕ ಪರಿಷ್ಕರಣೆ ಹೊಣೆಯನ್ನು ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಪಠ್ಯಪುಸ್ತಕಗಳ ಪರಿಷ್ಕರಣಾ ಸಮಿತಿಗೆ ನೀಡಿದೆ.
ಈಗಾಗಲೇ ರೋಹಿತ್ ಚಕ್ರತೀರ್ಥ ಅವರ ನೇತೃತ್ವದ ಪಠ್ಯಪುಸ್ತಕಗಳ ಪರಿಷ್ಕರಣಾ ಸಮಿತಿಯು ಶಾಲಾ ಪಠ್ಯಪುಸ್ತಕಗಳ ಪರಿಷ್ಕರಣೆ ಮಾಡಿದೆ. ಇದು ಎಡಪಂಥೀಯ ಚಿಂತಕರ ಅಸಮಾಧಾನಕ್ಕೆ ಗುರಿಯಾಗಿತ್ತು. ಇದರ ಬೆನ್ನಲ್ಲೇ ದ್ವಿತೀಯ ಪಿಯುಸಿ ಕಲಾ ವಿಭಾಗದ ಭಾರತ ಇತಿಹಾಸ ಅಧ್ಯಯನ ಪಠ್ಯಪುಸ್ತಕದ ಪರಿಷ್ಕರಣೆಯನ್ನು ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಗೆ ನೀಡಿರುವುದು ಎಡಪಂಥೀಯರ ಕಣ್ಣು ಕೆಂಪಾಗಿಸಿದೆ.
ಪಠ್ಯಪುಸ್ತಕಗಳ ಬ್ರಾಹ್ಮಣೀಕರಣ ಆಗಿದೆ ಎಂದು ಪ್ರಗತಿಪರರು ಮತ್ತು ಕಾಂಗ್ರೆಸ್ಸಿಗರು ಆರೋಪಿಸಿದ್ದಾರೆ. ಈ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಶಿಕ್ಷಣ ಸಚಿವರು, ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿ ಪರಿಷ್ಕರಿಸಿದ ಪಠ್ಯಪುಸ್ತಕಗಳಲ್ಲಿ 19 ಜನ ಬ್ರಾಹ್ಮಣ ಲೇಖಕರ ಪಠ್ಯಗಳಿದ್ದವು. ಅಲ್ಲದೆ, ಸಂಗೊಳ್ಳಿ ರಾಯಣ್ಣ, ಅಂಬೇಡ್ಕರ್, ಮಹಾತ್ಮ ಗಾಂಧೀಜಿ, ಮೈಸೂರು ಮಹಾರಾಜರು, ರಾಣಿ ಅಬ್ಬಕ್ಕ, ಮದಕರಿ ನಾಯಕ, ಕುವೆಂಪು ಮುಂತಾದವರ ಪಾಠವನ್ನು ಕೈಬಿಟ್ಟಿದ್ದರು. ಆವಾಗ ಪ್ರಗತಿಪರರು ಯಾಕೆ ಮಾತಾಡಲಿಲ್ಲ ಎಂದು ಪ್ರಶ್ನಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.