ಟೋಕಿಯೊ: ಟೋಕಿಯೊದಲ್ಲಿ ನಡೆಯುತ್ತಿರುವ ಕ್ವಾಡ್ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಜೋ ಬೈಡನ್ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ಎರಡೂ ರಾಷ್ಟ್ರಗಳ ನಡುವಣ ಬಾಂಧವ್ಯ ದೃಢಗೊಳಿಸುವ ನಿಟ್ಟಿನಲ್ಲಿ ಉಭಯ ನಾಯಕರು ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಾಂಕ್ರಾಮಿಕ ರೋಗವನ್ನು ನಿಭಾಯಿಸುವಲ್ಲಿ ಚೀನಾದ ವೈಫಲ್ಯ ಮತ್ತು ಭಾರತದ ಯಶಸ್ಸನ್ನು ಬೈಡನ್ ಹೋಲಿಕೆ ಮಾಡಿದ್ದು, ಪ್ರಜಾಸತ್ತಾತ್ಮಕ ವಿಧಾನದ ಮೂಲಕ ಕೋವಿಡ್ ನಿಭಾಯಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯವನ್ನು ಶ್ಲಾಘಿಸಿದ್ದಾರೆ.
ಪ್ರಧಾನಿ ಮೋದಿಯವರ ಯಶಸ್ಸು ಪ್ರಜಾಪ್ರಭುತ್ವಗಳು ಏನು ನೀಡಬಲ್ಲವು ಎಂಬುದನ್ನು ಜಗತ್ತಿಗೆ ತೋರಿಸಿದೆ. ಚೀನಾ ಮತ್ತು ರಷ್ಯಾದಂತಹ ನಿರಂಕುಶಾಧಿಕಾರಗಳು ವೇಗವಾಗಿ ಬದಲಾಗುತ್ತಿರುವ ಜಗತ್ತನ್ನು ಉತ್ತಮವಾಗಿ ನಿಭಾಯಿಸಬಲ್ಲವು ಎಂಬ ಸುಳ್ಳು ಇಂದು ಬಹಿಂರಗೊಂಡಿದೆ” ಎಂದು ಬೈಡನ್ ಹೇಳಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಮೋದಿ, ಜಾಗತಿಕ ಶಾಂತಿ ಮತ್ತು ಸ್ಥಿರತೆಗಾಗಿ ಭಾರತ-ಅಮೆರಿಕ ಸ್ನೇಹ ಸಂಬಂಧ ಉತ್ತಮ ಶಕ್ತಿಯಾಗಿ ಮುಂದುವರೆಯುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ನಮ್ಮ ಜನರ ನಡುವಿನ ಸಂಬಂಧಗಳು ಮತ್ತು ಬಲವಾದ ಆರ್ಥಿಕ ಸಹಕಾರವು ನಮ್ಮ ಪಾಲುದಾರಿಕೆಯನ್ನು ಅನನ್ಯವಾಗಿಸುತ್ತದೆ. ನಮ್ಮ ವ್ಯಾಪಾರ ಮತ್ತು ಹೂಡಿಕೆ ಸಂಬಂಧಗಳು ಸ್ಥಿರವಾಗಿ ಏರಿಕೆಯಾಗುತ್ತಿವೆ. ಆದರೆ, ಅವುಗಳು ಇನ್ನೂ ನಮ್ಮ ಸಾಮರ್ಥ್ಯಕ್ಕಿಂತ ಕೆಳಗಿವೆ ಎನ್ನುವ ಮೂಲಕ ಪ್ರಧಾನಿ ಮೋದಿ ಉಭಯ ರಾಷ್ಟ್ರಗಳ ನಡುವೆ ವ್ಯಾಪಾರ ಹಾಗೂ ಹೂಡಿಕೆ ಹೆಚ್ಚಿಸುವ ಆಶಯ ವ್ಯಕ್ತಪಡಿಸಿದರು.
ಭಾರತ-ಅಮೆರಿಕ ತಂತ್ರಜ್ಞಾನದ ನೆಲೆಯಲ್ಲಿ ದ್ವಿಪಕ್ಷೀಯ ಸಹಕಾರವನ್ನು ಹೆಚ್ಚಿಸುತ್ತಿವೆ, ಜಾಗತಿಕ ವಿಷಯಗಳಲ್ಲೂ ನಿಕಟವಾಗಿ ಸಹಕರಿಸುತ್ತಿವೆ. ಇಂಡೋ-ಪೆಸಿಫಿಕ್ ಬಗ್ಗೆ ಭಾರತ ಮತ್ತು ಯುಎಸ್ ಒಂದೇ ರೀತಿಯ ಅಭಿಪ್ರಾಯಗಳನ್ನು ಹೊಂದಿವೆ ಎಂದು ಪ್ರಧಾನಿ ಹೇಳಿದ್ದಾರೆ.
#WATCH "India & US partnership in the true sense is a partnership of trust," says PM Modi in a bilateral meeting with US President Joe Biden, in Tokyo pic.twitter.com/KIweBryiJC
— ANI (@ANI) May 24, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.