ನವದೆಹಲಿ: ಹಿಂಸಾಚಾರ ಪೀಡಿತ ಯೆಮೆನ್ನಲ್ಲಿನ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ಆರಂಭಿಸಿದ್ದ ‘ಆಪರೇಶನ್ ರಾಹತ್’ ನಿರೀಕ್ಷೆಗೂ ಮೀರಿ ಯಶಸ್ಸನ್ನು ಸಾಧಿಸಿದೆ.
ಅಪಾಯದಲ್ಲಿದ್ದ 4 ಸಾವಿರ ಭಾರತೀಯರನ್ನೂ ಸುರಕ್ಷಿತವಾಗಿ ತಾಯ್ನಾಡಿಗೆ ಕರೆ ತರಲಾಗಿದೆ. ಇದಕ್ಕೆ ಕಾರಣೀಕರ್ತರಾದ ವಿದೇಶಾಂಗ ಸಚಿವಾಲಯ ಮತ್ತು ಸೇನೆ ಪಡೆಗೆ ಪ್ರಶಂಶೆಗಳ ಸುರಿಮಳೆಯೇ ಹರಿದು ಬರುತ್ತಿದೆ.
ಬಹುತೇಕ ಎಲ್ಲಾ ಭಾರತೀಯರು ಸುರಕ್ಷಿತವಾಗಿ ದೇಶಕ್ಕೆ ವಾಪಾಸ್ಸಾದ ಹಿನ್ನಲೆಯಲ್ಲಿ ಬುಧವಾರ ’ಆಪರೇಶನ್ ರಾಹತ್’ನ್ನು ಅಂತ್ಯಗೊಳಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ತನ್ನ ದೇಶದ ನಾಗರಿಕರನ್ನು ರಕ್ಷಿಸುವಲ್ಲಿ ಯಶಸ್ವಿಯಾದ ಭಾರತವನ್ನು ಅಮೆರಿಕ ಸೇರಿದಂತೆ ಇತರ ರಾಷ್ಟ್ರಗಳು ಶ್ಲಾಘಿಸಿವೆ, ಮಾತ್ರವಲ್ಲ ತಮ್ಮ ದೇಶದ ನಾಗರಿಕರನ್ನು ರಕ್ಷಿಸಲು ಸಹಾಯ ಮಾಡುವಂತೆ ಕೋರಿವೆ.
ಕೇವಲ ಭಾರತೀಯರನ್ನು ಮಾತ್ರವಲ್ಲ ಇತರ ವಿದೇಶಿಗರನ್ನೂ ಯೆಮೆನ್ನಿಂದ ರಕ್ಷಿಸುವುದು ನಮ್ಮ ಆದ್ಯತೆಯಾಗಿದೆ ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಹೇಳಿದ್ದಾರೆ.
ಶಿಯಾ ಮತ್ತು ಸುನ್ನಿಗಳ ನಡುವೆ ನಡೆಯುತ್ತಿರುವ ಕಾಳಗದಿಂದಾಗಿ ಯೆಮೆನ್ ಅಕ್ಷರಶಃ ನಡುಗಿ ಹೋಗಿದೆ. ಅಲ್ಲಿನ ಹಿಂಸಾಚಾರಕ್ಕೆ ಇದುವರೆಗೆ 560 ಮಂದಿ ಬಲಿಯಾಗಿದ್ದಾರೆ. ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ವಿಶ್ವಸಂಸ್ಥೆ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.