ನವದೆಹಲಿ: ಇಂದಿನಿಂದ ಗುಜರಾತ್ನಲ್ಲಿ ಎರಡು ದಿನಗಳ ರಾಷ್ಟ್ರೀಯ ಶಿಕ್ಷಣ ಸಚಿವರ ಸಮ್ಮೇಳನ ನಡೆಯಲಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಇತರ ಕೇಂದ್ರ ಸಚಿವರು ಮತ್ತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಶಿಕ್ಷಣ ಸಚಿವರು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.
ಈ ಸಮ್ಮೇಳನವು ದೇಶದಲ್ಲಿ ಶಿಕ್ಷಣ ಪರಿಸರ ವ್ಯವಸ್ಥೆಯನ್ನು ಬಲಪಡಿಸುವ ಕುರಿತು ಚರ್ಚೆಗಳಿಗೆ ಸಾಕ್ಷಿಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಇದು ರಾಷ್ಟ್ರೀಯ ಶಿಕ್ಷಣ ನೀತಿ 2020 ರ ಅನುಷ್ಠಾನ, ಶಾಲೆಗಳಲ್ಲಿ ಕೌಶಲ್ಯ ಮತ್ತು ರಾಷ್ಟ್ರೀಯ ಡಿಜಿಟಲ್ ಶಿಕ್ಷಣ ಆರ್ಕಿಟೆಕ್ಚರ್, ರಾಷ್ಟ್ರೀಯ ಶೈಕ್ಷಣಿಕ ತಂತ್ರಜ್ಞಾನ ವೇದಿಕೆ ಮುಂತಾದ ಡಿಜಿಟಲ್ ಉಪಕ್ರಮಗಳ ಮೇಲೆ ಕೇಂದ್ರೀಕರಿಸುತ್ತದೆ.
ರಾಜ್ಯ ಶಿಕ್ಷಣ ಸಚಿವರು ವಿದ್ಯಾ ಸಮೀಕ್ಷಾ ಕೇಂದ್ರ, ಭಾಸ್ಕರಾಚಾರ್ಯ ನ್ಯಾಷನಲ್ ಇನ್ಸ್ಟಿಟ್ಯೂಟ್ ಫಾರ್ ಸ್ಪೇಸ್ ಅಪ್ಲಿಕೇಷನ್ಸ್ ಮತ್ತು ಜಿಯೋ-ಇನ್ಫರ್ಮ್ಯಾಟಿಕ್ಸ್- ಬಿಸಾಗ್, ನ್ಯಾಷನಲ್ ಫೋರೆನ್ಸಿಕ್ ಸೈನ್ಸ್ ಯೂನಿವರ್ಸಿಟಿ-ಎನ್ಎಫ್ಎಸ್ಯು ಮತ್ತು ಇಂಟರ್ನ್ಯಾಶನಲ್ ಆಟೋಮೊಬೈಲ್ ಸೆಂಟರ್ ಆಫ್ ಎಕ್ಸಲೆನ್ಸ್ಗಳಿಗೂ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.