ನವದೆಹಲಿ: ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಗೆದ್ದ ಭಾರತಕ್ಕೆ ಹೆಮ್ಮೆ ತಂದಿರುವ ಜಾವಲಿನ್ ಥ್ರೋ ಕ್ರೀಡಾಪಟು ನೀರಜ್ ಚೋಪ್ರಾ ಅವರು ಮತ್ತೊಂದು ರಾಷ್ಟ್ರೀಯ ದಾಖಲೆಯನ್ನು ನಿರ್ಮಿಸಿದ್ದಾರೆ.
ಫಿನ್ಲ್ಯಾಂಡ್ ನಲ್ಲಿ ನಡೆದ ಪಾವೋ ನೂರ್ಮಿ ಗೇಮ್ಸ್ನಲ್ಲಿ 89.30 ಮೀಟರ್ ದೂರ ಜಾವಲಿನ್ ಎಸೆದು ಬೆಳ್ಳಿ ಪದಕ ಗಳಿಸುವ ಮೂಲಕ ತಮ್ಮ ಹಿಂದಿನ ರಾಷ್ಟ್ರೀಯ ದಾಖಲೆಯನ್ನು ಮುರಿದಿದ್ದಾರೆ.
ಕಳೆದ ವರ್ಷ ನಡೆದ ಟೊಕಿಯೋ ಒಲಿಂಪಿಕ್ಸ್ ಬಳಿಕ ನೀರಜ್ ಚೋಪ್ರಾ ಅವರು ಭಾಗವಹಿಸುತ್ತಿರುವ ಮೊದಲ ಅಂತರಾಷ್ಟ್ರೀಯ ಕ್ರೀಡಾಕೂಟ ಇದಾಗಿದೆ.
ಇದರಲ್ಲಿ ನೀರಜ್ ಚೋಪ್ರಾ ಅವರು ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ.
ಟೊಕಿಯೋ ಒಲಿಂಪಿಕ್ಸ್ನಲ್ಲಿ 87.58 ಮೀಟರ್ ದೂರಕ್ಕೆ ಜಾವೆಲಿನ್ ಎಸೆಯುವ ಮೂಲಕ ಅವರು ಭಾರತಕ್ಕೆ ಐತಿಹಾಸಿಕ ಚಿನ್ನವನ್ನು ದೊರಕಿಸಿಕೊಟ್ಟಿದ್ದರು.
Olympic Champion Neeraj Chopra settles for a Silver Medal with a New National Record Throw of 89.30m at the Paavo Nurmi Games in Finland.@afi We can see several performance hikes in various events this season. Hope for more further. @Adille1 @Media_SAI @SPORTINGINDIAtw pic.twitter.com/cBLg4Ke8nh
— Athletics Federation of India (@afiindia) June 14, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.