ಬೀಜಿಂಗ್: ಚೀನಾದ ರಾಜಧಾನಿ ಬೀಜಿಂಗ್ನಲ್ಲಿ ಎರಡು ದಿನಗಳ ಬ್ರಿಕ್ಸ್ ಶೃಂಗಸಭೆ ಇಂದು ವರ್ಚುವಲ್ ಆಗಿ ಆರಂಭಗೊಂಡಿದೆ. ಚೀನಾ ಈಗ ಬ್ರಿಕ್ಸ್ ನ ಅಧ್ಯಕ್ಷ ಸ್ಥಾನದಲ್ಲಿದೆ, ಹೀಗಾಗಿ ಅದು ಶೃಂಗಸಭೆಯ ಅತಿಥ್ಯವನ್ನು ವಹಿಸಿಕೊಂಡಿದೆ.
ಪ್ರಧಾನಿ ನರೇಂದ್ರ ಮೋದಿಯವರು ವರ್ಚುವಲ್ ಆಗಿ ಶೃಂಗಸಭೆಯಲ್ಲಿ ಭಾಗಿಯಾಗಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ದಕ್ಷಿಣ ಆಫ್ರಿಕಾ ಅಧ್ಯಕ್ಷ ಸಿರಿಲ್ ರಾಮಫೋಸಾ, ಬ್ರೆಜಿಲ್ ಅಧ್ಯಕ್ಷ ಜೈಲ್ ಬೊಲ್ಸೊನಾರೊ ಅವರು ಕೂಡ ಈ ಸಭೆಯಲ್ಲಿ ವರ್ಚುವಲ್ ಆಗಿ ಪಾಲ್ಗೊಂಡಿದ್ದಾರೆ.
ಈ ಶೃಂಗಸಭೆಯಲ್ಲಿ ರಷ್ಯಾ ಮತ್ತು ಉಕ್ರೇನ್ ಯುದ್ಧದ ಕಾರಣದಿಂದ ಬ್ರಿಕ್ಸ್ ರಾಷ್ಟ್ರಗಳ ಆರ್ಥಿಕತೆ ಮೇಲೆ ಉಂಟಾಗುವ ಆರ್ಥಿಕ ಪರಿಣಾಮದ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ.
ಶೃಂಗಸಭೆಯ ಮೊದಲು, ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಬ್ರಿಕ್ಸ್ ವ್ಯಾಪಾರ ವೇದಿಕೆಯ ಉದ್ಘಾಟನಾ ಸಮಾರಂಭದಲ್ಲಿ ವರ್ಚುವಲ್ ಆಗಿ ಪ್ರಮುಖ ಭಾಷಣ ಮಾಡಿದರು.
ವರ್ಚುವಲ್ ಶೃಂಗಸಭೆಗೂ ಮುನ್ನ ಚೀನಾದಲ್ಲಿನ ಭಾರತದ ರಾಯಭಾರಿ ಪ್ರದೀಪ್ ಕುಮಾರ್ ರಾವತ್ ಅವರು ಬೀಜಿಂಗ್ನಲ್ಲಿ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರನ್ನು ಭೇಟಿ ಮಾಡಿದರು, ಈ ವೇಳೆ ಇಬ್ಬರೂ ಗಡಿ ಸಮಸ್ಯೆ ಮತ್ತು ಭಾರತೀಯರು ಚೀನಾಕ್ಕೆ ಮರಳುವುದು ಸೇರಿದಂತೆ ಪರಸ್ಪರ ಹಿತಾಸಕ್ತಿಯ ವಿಷಯಗಳ ಬಗ್ಗೆ ಚರ್ಚಿಸಿದರು ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.