ನವದೆಹಲಿ: ಜುಲೈ 18 ರಂದು ನಡೆಯಲಿರುವ ಚುನಾವಣೆಗೆ ವಿರೋಧ ಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿಯಾಗಿರುವ ಯಶವಂತ್ ಸಿನ್ಹಾ ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ.
ಸಿನ್ಹಾ ಅವರು ರಾಷ್ಟ್ರಪತಿ ಚುನಾವಣೆಗೆ ಚುನಾವಣಾಧಿಕಾರಿಯಾಗಿರುವ ರಾಜ್ಯಸಭಾ ಪ್ರಧಾನ ಕಾರ್ಯದರ್ಶಿ ಪಿ ಸಿ ಮೋದಿ ಅವರಿಗೆ ನಾಲ್ಕು ಸೆಟ್ ನಾಮಪತ್ರಗಳನ್ನು ಹಸ್ತಾಂತರಿಸಿದರು.
ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಜೈರಾಮ್ ರಮೇಶ್, ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್, ಡಿಎಂಕೆಯ ಎ ರಾಜಾ ಮತ್ತು ಎನ್ಸಿ ನಾಯಕ ಫಾರೂಕ್ ಅಬ್ದುಲ್ಲಾ, ಎನ್ಸಿಪಿ ವರಿಷ್ಠ ಶರದ್ ಪವಾರ್ ಸೇರಿದಂತೆ ಪ್ರಮುಖ ವಿರೋಧ ಪಕ್ಷದ ನಾಯಕರು ಸಿನ್ಹಾ ನಾಮಪತ್ರ ಸಲ್ಲಿಸುವಾಗ ಹಾಜರಿದ್ದರು.
ಜೂನ್ 21 ರಂದು ರಾಷ್ಟ್ರಪತಿ ಚುನಾವಣೆಗೆ ಸಿನ್ಹಾ ಅವರನ್ನು ವಿರೋಧ ಪಕ್ಷದ ಸಾಮಾನ್ಯ ಅಭ್ಯರ್ಥಿಯಾಗಿ ಹೆಸರಿಸಲಾಯಿತು.
ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಈಗಾಗಲೇ ಕಳೆದ ವಾರ ನಾಮಪತ್ರ ಸಲ್ಲಿಸಿದ್ದಾರೆ.
Opposition's Presidential polls candidate Yashwant Sinha files his nomination at the Parliament in Delhi pic.twitter.com/2BGztPZwmB
— ANI (@ANI) June 27, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.