
ಬೀಜಿಂಗ್: ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂದಿನ ವರ್ಷದ ಜಿ-20 ನಾಯಕರ ಶೃಂಗಸಭೆಯನ್ನು ನಡೆಸಲು ಭಾರತ ಯೋಜನೆ ಹಾಕಿಕೊಂಡಿದೆ. ಆದರೆ ಭಾರತದ ಈ ಯೋಜನೆಗೆ ಚೀನಾ ವಿರೋಧ ವ್ಯಕ್ತಪಡಿಸಿದೆ.
ತನ್ನ ಪರಮಾಪ್ತ ಪಾಕಿಸ್ಥಾನದ ಕೋರಿಕೆಯಂತೆ ಚೀನಾ ಈ ಅಪಸ್ವರ ಎತ್ತಿದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ.
“ನಾವು ಈ ಇತ್ತೀಚಿನ ಬೆಳವಣಿಗೆಯನ್ನು ಗಮನಿಸಿದ್ದೇವೆ.ಕಾಶ್ಮೀರ ವಿಷಯದಲ್ಲಿ ಚೀನಾದ ನಿಲುವು ಸ್ಥಿರವಾಗಿದೆ ಮತ್ತು ಸ್ಪಷ್ಟವಾಗಿದೆ. ಯುಎನ್ ಚಾರ್ಟರ್, ಭದ್ರತಾ ಮಂಡಳಿಯ ನಿರ್ಣಯಗಳು ಮತ್ತು ದ್ವಿಪಕ್ಷೀಯ ಒಪ್ಪಂದಕ್ಕೆ ಅನುಗುಣವಾಗಿ ಕಾಶ್ಮೀರ ಸಮಸ್ಯೆ, ಹಿಂದಿನಿಂದಲೂ ಉಳಿದಿರುವ ವಿವಾದವನ್ನು ಶಾಂತಿಯುತವಾಗಿ ಮತ್ತು ಸರಿಯಾಗಿ ಪರಿಹರಿಸಬೇಕ” ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಝಾವೊ ಲಿಜಿಯಾನ್ ಹೇಳಿದ್ದಾರೆ.
“ಪರಿಸ್ಥಿತಿಯನ್ನು ಸಂಕೀರ್ಣಗೊಳಿಸುವ ಏಕಪಕ್ಷೀಯ ನಡೆಗಳನ್ನು ಸಂಬಂಧಪಟ್ಟ ಪಕ್ಷಗಳು ತಪ್ಪಿಸಬೇಕಾಗಿದೆ. ಪ್ರಾದೇಶಿಕ ಶಾಂತಿ ಮತ್ತು ಸ್ಥಿರತೆಯನ್ನು ಕಾಪಾಡಲು ಮಾತುಕತೆ ಮತ್ತು ಸಮಾಲೋಚನೆಯ ಮೂಲಕ ವಿವಾದವನ್ನು ಇತ್ಯರ್ಥಪಡಿಸಲು ಪ್ರಯತ್ನಿಸಬೇಕು” ಎಂದಿದ್ದಾರೆ.
ಜಿ20 ಸದಸ್ಯ ರಾಷ್ಟ್ರವಾಗಿರುವ ಚೀನಾ 2023ರಲ್ಲಿ ನಡೆಯಲಿರುವ ಸಭೆಯಲ್ಲಿ ಪಾಲ್ಗೊಳ್ಳಲಿದೆಯೇ ಎಂಬ ಪ್ರಶ್ನೆಗೆ, ‘ಚೀನಾ ಸಭೆಯಲ್ಲಿ ಪಾಲ್ಗೊಳ್ಳುವುದೇ ಎಂಬುದನ್ನು ಮುಂದೆ ನಾವು ನೋಡುತ್ತೇವೆ’ ಎಂದಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ G-20 ರ ಸಭೆಗಳನ್ನು ಆಯೋಜಿಸುವ ಭಾರತದ ನಿರ್ಧಾರಕ್ಕೆ ಈಗಾಗಲೇ ಪಾಕಿಸ್ಥಾನ ಅಪಸ್ವರ ಎತ್ತಿದೆ. ಆದರೆ ಈ ಎರಡು ರಾಷ್ಟ್ರಗಳಿಗೆ ಸೆಡ್ಡು ಹೊಡೆಯಲು ಭಾರತ ದೃಢ ನಿರ್ಧಾರ ತೆಗೆದುಕೊಳ್ಳಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


