ನವದೆಹಲಿ: ಶಿರೋಮಣಿ ಅಕಾಲಿದಳ ಪಕ್ಷವು ಎನ್ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸುವುದಾಗಿ ಘೋಷಿಸಿದೆ. ಚಂಡೀಗಢದಲ್ಲಿ ಪಕ್ಷದ ಪದಾಧಿಕಾರಿಗಳ ಸಭೆಯ ನಂತರ ಅಕಾಲಿ ದಳ ಅಧ್ಯಕ್ಷ ಸುಖ್ಬೀರ್ ಸಿಂಗ್ ಬಾದಲ್ ಈ ವಿಷಯವನ್ನು ಪ್ರಕಟಿಸಿದ್ದಾರೆ.
ಕೆಲವು ವಿಷಯಗಳಲ್ಲಿ ಬಿಜೆಪಿಯೊಂದಿಗೆ ಭಿನ್ನಾಭಿಪ್ರಾಯಗಳಿದ್ದರೂ, ಅಕಾಲಿ ದಳ ಯಾವಾಗಲೂ ಸಮಾಜದ ಬಡ ಮತ್ತು ದುರ್ಬಲ ವರ್ಗಗಳಿಗಾಗಿ ಕೆಲಸ ಮಾಡುತ್ತದೆ. ಹೀಗಾಗಿ ಎನ್ಡಿಎ ರಾಷ್ಟ್ರಪತಿ ಅಭ್ಯರ್ಥಿಯನ್ನು ಬೆಂಬಲಿಸಲು ನಿರ್ಧರಿಸಿದ್ದೇವೆ ಎಂದು ಬಾದಲ್ ಹೇಳಿದ್ದಾರೆ.
ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗೆ ಬೆಂಬಲ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಕೆಲ ದಿನಗಳ ಹಿಂದೆ ಮುರ್ಮು ಚಂಡೀಗಢದಲ್ಲಿ ಶಿರೋಮಣಿ ಅಕಾಲಿದಳದ ನಾಯಕರನ್ನು ಭೇಟಿಯಾಗಿ ರಾಷ್ಟ್ರಪತಿ ಚುನಾವಣೆಯಲ್ಲಿ ಬೆಂಬಲ ನೀಡುವಂತೆ ಕೋರಿದ್ದರು. ಮುರ್ಮು ಅವರು ಹರಿಯಾಣದ ಬಿಜೆಪಿ, ಜೆಜೆಪಿ ಶಾಸಕರು ಮತ್ತು ಸಂಸದರು ಮತ್ತು ಪಂಜಾಬ್ ಬಿಜೆಪಿ ನಾಯಕರನ್ನು ಕೂಡ ಭೇಟಿಯಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.