ಮುಂಬಯಿ: ಮಹಾರಾಷ್ಟ್ರದ ಅಮರಾವತಿಯಲ್ಲಿ ಶನಿವಾರ ನಡೆದ 54 ವರ್ಷದ ಔಷಧ ವ್ಯಾಪಾರಿಯ ಹತ್ಯೆ ಪ್ರಕರಣದ ತನಿಖೆಯನ್ನು ಎನ್ಐಎ ವಹಿಸಿಕೊಂಡಿದೆ.
ಉಮೇಶ್ ಪ್ರಹ್ಲಾದರಾವ್ ಕೊಲ್ಹೆ ಎಂದು ಗುರುತಿಸಲಾದ ಔಷಧ ವ್ಯಾಪಾರಿ ನೂಪುರ್ ಶರ್ಮಾ ಅವರನ್ನು ಬೆಂಬಲಿಸುವ ಪೋಸ್ಟ್ ಅನ್ನು ವಾಟ್ಸಾಪ್ ಗ್ರೂಪ್ಗಳಲ್ಲಿ ಹಂಚಿಕೊಂಡಿದ್ದರು. ಇದೇ ಕಾರಣಕ್ಕೆ ಅವರ ಕೊಲೆಯಾಗಿದೆ ಎಂದು ಹೇಳಲಾಗುತ್ತಿದೆ. ರಾಜಸ್ಥಾನದ ಉದಯಪುರ್ನಲ್ಲಿ ನಡೆದ ಕನ್ಹಯ್ಯ ಲಾಲ್ ಅವರ ಹತ್ಯೆಗೂ ಇದೇ ಕಾರಣ ಎನ್ನಲಾಗುತ್ತಿದೆ.
“ಕೊಲೆಯ ಹಿಂದಿನ ಪಿತೂರಿ, ಸಂಘಟನೆಗಳ ಒಳಗೊಳ್ಳುವಿಕೆ ಮತ್ತು ಅಂತರರಾಷ್ಟ್ರೀಯ ಸಂಪರ್ಕಗಳನ್ನು ಕೂಲಂಕಷವಾಗಿ ತನಿಖೆ ಮಾಡಲಾಗುವುದು” ಎಂದು ಗೃಹ ಸಚಿವಾಲಯ ಟ್ವೀಟ್ನಲ್ಲಿ ತಿಳಿಸಿದೆ.
ಜೂನ್ 21 ರಂದು ರಾತ್ರಿ 10 ರಿಂದ 10.30 ರ ನಡುವೆ ಕೋಲ್ಹೆ ಅವರು ತಮ್ಮ ಅಂಗಡಿಯನ್ನು ಮುಚ್ಚಿ ದ್ವಿಚಕ್ರ ವಾಹನದಲ್ಲಿ ಮನೆಗೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ಮೃತರ ಮಗ ಸಂಕೇತ್ ಅಮರಾವತಿಯ ಸಿಟಿ ಕೊತ್ವಾಲಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಎಫ್ಐಆರ್ ದಾಖಲಾಗಿದ್ದು, ಅಮರಾವತಿಯ ನಿವಾಸಿಗಳು ಮತ್ತು ದಿನಗೂಲಿ ಕಾರ್ಮಿಕರಾದ ಮುದ್ದ್ಸಿರ್ ಅಹಮದ್ (22), ಶಾರುಖ್ ಪಠಾಣ್ (25), ಅಬ್ದುಲ್ ತೌಫೀಕ್ (24) ಶೋಯಬ್ ಖಾನ್ (22) ಮತ್ತು ಅತೀಬ್ ರಶೀದ್ (22) ಎಂಬ ಐವರನ್ನು ಬಂಧಿಸಲಾಗಿದೆ. ಪೊಲೀಸರು ನೀಡಿದ ಮಾಹಿತಿಯಂತೆ ಪ್ರಮುಖ ಆರೋಪಿ ಇರ್ಫಾನ್ ಖಾನ್ (32) ಪತ್ತೆಗಾಗಿ ಶೋಧ ನಡೆಯುತ್ತಿದೆ.
MHA has handed over the investigation of the case relating to the barbaric killing of Shri Umesh Kolhe in Amravati Maharashtra on 21st June to NIA.
The conspiracy behind the killing, involvement of organisations and international linkages would be thoroughly investigated.
— गृहमंत्री कार्यालय, HMO India (@HMOIndia) July 2, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.