ಟೋಕಿಯೊ: ಜಪಾನ್ನ ಪಶ್ಚಿಮದ ನಗರ ನಾರಾದಲ್ಲಿ ಅಪರಿಚಿತ ವ್ಯಕ್ತಿಯೊಬ್ಬನ ಗುಂಡಿನ ದಾಳಿಯಿಂದಾಗಿ ಜಪಾನ್ನ ಮಾಜಿ ಪ್ರಧಾನಿ ಶಿಂಜೋ ಅಬೆ ಕುಸಿದು ಬಿದ್ದಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶಂಕಿತ ದಾಳಿಕೋರನನ್ನು ಜಪಾನ್ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜಪಾನ್ನ ಪ್ರಮುಖ ಸುದ್ದಿ ಸಂಸ್ಥೆ ಕ್ಯೋಡೋ ನ್ಯೂಸ್ ಪ್ರಕಾರ, ಅಬೆ ಅವರು ಪ್ರಜ್ಞಾಹೀನರಾಗಿದ್ದಾರೆ ಮತ್ತು ಯಾವುದೇ ಚೇತರಿಕೆ ಲಕ್ಷಣಗಳನ್ನು ತೋರಿಸುತ್ತಿಲ್ಲ. ಸದ್ಯ ಅವರು ಚಿಂತಾಜನಕ ಸ್ಥಿತಿಯಲ್ಲಿದ್ದಾರೆ ಎನ್ನಲಾಗಿದೆ.
ನಾರಾದ ಬೀದಿಯಲ್ಲಿ ಭಾಷಣ ಮಾಡುತ್ತಿದ್ದಾಗ ಹಿಂದಿನಿಂದ ಬಂದ ವ್ಯಕ್ತಿ ಅಬೆ ಮೇಲೆ ಹಲ್ಲೆ ನಡೆಸಿದ್ದಾನೆ. ಬೆಳಿಗ್ಗೆ 11.30 ರ ಸುಮಾರಿಗೆ ಅಬೆ ಮೇಲೆ ದಾಳಿ ಮಾಡಿದ ವ್ಯಕ್ತಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಜಪಾನ್ ಟೈಮ್ಸ್ ವರದಿ ಮಾಡಿದೆ.
40ರ ಪ್ರಾಯದ ವ್ಯಕ್ತಿಯೊಬ್ಬನನ್ನು ಕೊಲೆ ಯತ್ನಕ್ಕಾಗಿ ಬಂಧಿಸಲಾಗಿದ್ದು, ಆತನಿಂದ ಬಂದೂಕನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಅಬೆ ಭಾಷಣ ಮಾಡುವಾಗ ದಾಳಿಕೋರನಿಂದ ಗುಂಡು ಹಾರಿಸಿದ ಕ್ಷಣದ ಹಲವಾರು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಬಂದಿವೆ. ಅಬೆ ಎದೆಗೆ ಗುಂಡು ತಗುಲಿ ಪ್ರಜ್ಞಾಹೀನರಾಗಿ ಬಿದ್ದ ಕೆಲವು ಸೆಕೆಂಡುಗಳ ನಂತರ ಸ್ಥಳೀಯರು ಸಹಾಯ ಮಾಡಲು ಧಾವಿಸುತ್ತಿರುವುದನ್ನು ವೀಡಿಯೊ ತೋರಿಸುತ್ತದೆ.
Former Japanese PM Shinzo Abe was shot during a speech. Suspect is reportedly in custody. https://t.co/BPPoWO3oLw
— Daily Wire (@realDailyWire) July 8, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.