ನವದೆಹಲಿ: ತಮ್ಮ ಆತ್ಮೀಯ ಸ್ನೇಹಿತ, ಜಪಾನಿನ ಮಾಜಿ ಪ್ರಧಾನಿ ಶಿಂಜೋ ಅಬೆ ಮೇಲಿನ ದಾಳಿಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಟ್ವಿಟ್ ಮಾಡಿರುವ ಮೋದಿ, “ಆತ್ಮೀಯ ಸ್ನೇಹಿತ ಶಿಂಜೋ ಅಬೆ ಮೇಲಿನ ದಾಳಿಯಿಂದ ನಾನು ತೀವ್ರ ದುಃಖಿತನಾಗಿದ್ದೇನೆ ಮತ್ತು ಅವರ ಯೋಗಕ್ಷೇಮಕ್ಕಾಗಿ ಮತ್ತು ಜಪಾನ್ನ ಜನರಿಗಾಗಿ ಪ್ರಾರ್ಥಿಸುತ್ತಿದ್ದೇನೆ” ಎಂದಿದ್ದಾರೆ.
ಜಪಾನ್ನ ಮಾಜಿ ಪ್ರಧಾನಿ ಶಿಂಜೋ ಅಬೆ ಪಶ್ಚಿಮ ಜಪಾನ್ನಲ್ಲಿ ಶುಕ್ರವಾರ ಪ್ರಚಾರ ಭಾಷಣ ನಡೆಸುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿ ಅವರ ಮೇಲೆ ಗುಂಡು ಹಾರಿಸಿದ್ದಾನೆ. ಅವರಿಗೆ ತೀವ್ರ ಗಾಯವಾಗಿದ್ದು ಕುಸಿದು ಬಿದ್ದಿದ್ದಾರೆ ಮತ್ತು ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ಗುಂಡು ತಾಗಿದ ನಂತರ ಅಬೆ ಹೃದಯ ಮತ್ತು ಶ್ವಾಸಕೋಶ ಸ್ತಂಭನದಲ್ಲಿತ್ತು ಮತ್ತು ಅವರನ್ನು ಪ್ರಿಫೆಕ್ಚರಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಮೂಲಗಳು ತಿಳಿಸಿವೆ.
Deeply distressed by the attack on my dear friend Abe Shinzo. Our thoughts and prayers are with him, his family, and the people of Japan.
— Narendra Modi (@narendramodi) July 8, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.