News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಇಂದಿನಿಂದ ಮುಂಗಾರು ಅಧಿವೇಶನ: 24 ಮಸೂದೆ ಮಂಡನೆಗೆ ಕೇಂದ್ರ ಸಜ್ಜು

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನವು  ಪ್ರಾರಂಭವಾಗುತ್ತಿದೆ.  ಭಾರತದ 15 ನೇ ರಾಷ್ಟ್ರಪತಿಯ ಚುನಾವಣೆಯ ಹಿನ್ನೆಲೆಯಲ್ಲಿ ಈ ಅಧಿವೇಶನ ಮಹತ್ವ ಪಡೆದುಕೊಂಡಿದೆ. ಕೇಂದ್ರವು ಪತ್ರಿಕಾ ನೋಂದಣಿ ನಿಯತಕಾಲಿಕಗಳ ಮಸೂದೆ, 2022 ಸೇರಿದಂತೆ 24 ಮಸೂದೆಗಳನ್ನು ಮಂಡಿಸುವ ಸಾಧ್ಯತೆಯಿದೆ.

ಇಂದು ಬೆಳಗ್ಗೆ 11 ಗಂಟೆಗೆ ಅಧಿವೇಶನ ಆರಂಭವಾಗಿದೆ.

ವಿರೋಧ ಪಕ್ಷವು  16 ಸಮಸ್ಯೆಗಳನ್ನು ಪಟ್ಟಿಮಾಡಿದ್ದು, ಅಧಿವೇಶನದಲ್ಲಿ ಪ್ರಸ್ತಾಪಿಸಿ ಗದ್ದಲ ಎಬ್ಬಿಸಲು ತಯಾರಿ ನಡೆಸಿದೆ. ಸರ್ಕಾರ ಫೆಡರಲಿಸಂ ಒತ್ತಡಕ್ಕೆ ಒಳಗಾಗುತ್ತಿದೆ, ಅಗ್ನಿಪಥ ಯೋಜನೆ, ಏರುತ್ತಿರುವ ಬೆಲೆಗಳು ಮತ್ತು ಅನಿಯಂತ್ರಿತ ಹಣದುಬ್ಬರ ಮುಂತಾದ ವಿಷಯಗಳನ್ನು ಹಿಡಿದು ಸರ್ಕಾರವನ್ನು ಹಣಿಯಲು ಮುಂದಾಗಿದೆ.

ಮಾನ್ಸೂನ್ ಅಧಿವೇಶನದ ಮೊದಲ ದಿನದಂದು, ಸಾಮೂಹಿಕ ವಿನಾಶದ ಶಸ್ತ್ರಾಸ್ತ್ರಗಳು ಮತ್ತು ಅವುಗಳ ವಿತರಣಾ ವ್ಯವಸ್ಥೆಗಳ (ಕಾನೂನುಬಾಹಿರ ಚಟುವಟಿಕೆಗಳ ನಿಷೇಧ) ತಿದ್ದುಪಡಿ ಮಸೂದೆ, 2022 ಅನ್ನು ಸರ್ಕಾರ ಮಂಡಿಸಲು ಪ್ರಯತ್ನಿಸಲಿದೆ ಎಂದು ಮೂಲಗಳು ತಿಳಿಸಿವೆ. ಸಂಸತ್ತಿನ ಅಧಿವೇಶನ ಪ್ರಾರಂಭವಾಗುವ ಗಂಟೆಗಳ ಮೊದಲು, ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಸಾರ್ವಜನಿಕರಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಅರ್ಥಪೂರ್ಣ ಚರ್ಚೆ ನಡೆಸುವಂತೆ ಸಂಸತ್ತಿನ ಸದಸ್ಯರಿಗೆ ಕರೆ ನೀಡಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top