ನವದೆಹಲಿ: ಕೋವಿಡ್-19 ವಿರುದ್ಧದ ಲಸಿಕೆ ಅಭಿಯಾನದಲ್ಲಿ ಭಾರತ ಮಹತ್ವದ ಸಾಧನೆ ಮಾಡಿದೆ. ಇದುವರೆಗೆ ದೇಶದಲ್ಲಿ ವಿತರಿಸಲಾದ ಕೊರೊನಾ ಲಸಿಕೆ ಡೋಸ್ 200 ಕೋಟಿ ಮೈಲುಗಲ್ಲು ದಾಟಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಲಸಿಕೆ ಹಾಕಿದ ವೈದ್ಯರು, ದಾದಿಯರು, ಮುಂಚೂಣಿ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿ ಪತ್ರ ಬರೆದಿದ್ದಾರೆ.
ಜುಲೈ 17 ರಂದು ಭಾರತವು ಲಸಿಕೆ ನೀಡಿಕೆಯಲ್ಲಿ 200 ಕೋಟಿ ಡೋಸ್ ಹೆಗ್ಗುರುತನ್ನು ಸಾಧಿಸಿದೆ. ಈ ಮಹತ್ತರ ಕಾರ್ಯದಲ್ಲಿ ಪಾಲುದಾರರಾಗಿರುವ ಲಸಿಕೆ ನೀಡಿದ ನೋಂದಾಯಿತ ಕಾರ್ಯಕರ್ತರಿಗೆ ವೈಯಕ್ತಿಕ ಅಭಿನಂದನಾ ಪತ್ರವನ್ನು ಮೋದಿ ಬರೆದಿದ್ದಾರೆ.
ಕೋವಿಡ್ ಲಸಿಕೆ ನೀಡಿದವರು ಪತ್ರವನ್ನು ಕೋವಿನ್ ಲಾಗಿನ್ ಐಡಿಯಿಂದ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
2021ರ ಜನವರಿ 16 ರಿಂದ ದೇಶಾದ್ಯಂತ ಕೋವಿನ್ ವೇದಿಕೆಯ ಮೂಲಕ ಲಸಿಕೀಕರಣ ಅಭಿಯಾನ ಆರಂಭವಾಗಿತ್ತು.
ಇದೇ ವೇಳೆ ಕೋವಿಡ್ ಸಾಂಕ್ರಾಮಿಕದ ವಿರುದ್ಧದ ಹೋರಾಟದಲ್ಲಿ 200 ಕೋಟಿಯ ಲಸಿಕೆ ದಾಖಲೆಗಾಗಿ ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದಿಸಿದ್ದಾರೆ.
Prime Minister Narendra Modi lauds all vaccinators for achieving the 200 crore vaccine doses landmark on July 17. The PM has congratulated all vaccinators by sending appreciation letters to them personally; the same can be downloaded from their CoWIN login ID pic.twitter.com/cJ5bbF7ZWZ
— ANI (@ANI) July 20, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.