News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ನೀರಜ್‌ ಛೋಪ್ರಾಗೆ ಬೆಳ್ಳಿ: ವಿಶೇಷ ಕ್ಷಣ ಎಂದ ಮೋದಿ

ನವದೆಹಲಿ: ಒಲಿಂಪಿಕ್ ಚಾಂಪಿಯನ್ ನೀರಜ್ ಚೋಪ್ರಾ ಅವರು ಆಮೆರಿಕದಲ್ಲಿ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಪುರುಷರ ಜಾವೆಲಿನ್ ಥ್ರೋ ಫೈನಲ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ.

ಇಂದು ಬೆಳಗ್ಗೆ ಒರೆಗಾನ್‌ನ ಯುಜೀನ್‌ನಲ್ಲಿ ನಡೆದ ನಾಲ್ಕನೇ ಪ್ರಯತ್ನದಲ್ಲಿ 88.13 ಮೀಟರ್‌ ದೂರ ಎಸೆದು ಎರಡನೇ ಸ್ಥಾನ ಪಡೆದರು.

ನೀರಜ್ ಚೋಪ್ರಾ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮಾಜಿ ಲಾಂಗ್ ಜಂಪರ್ ಅಂಜು ಬಾಬಿ ಜಾರ್ಜ್ ನಂತರ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಪದಕ ಗೆದ್ದ ಎರಡನೇ ಭಾರತೀಯರಾಗಿದ್ದಾರೆ. ಆ್ಯಂಡರ್ಸನ್ ಪೀಟರ್ಸ್ 90.54 ಮೀಟರ್ ದೂರ ಎಸೆದು ಚಿನ್ನದ ಪದಕ ಗೆದ್ದಿದ್ದಾರೆ.

“ನಮ್ಮ ಅತ್ಯಂತ ಪ್ರತಿಷ್ಠಿತ ಅಥ್ಲೀಟ್‌ನಿಂದ ಉತ್ತಮ ಸಾಧನೆ! ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಐತಿಹಾಸಿಕ ಬೆಳ್ಳಿ ಪದಕವನ್ನು ಗೆದ್ದ ನೀರಜ್ ಚೋಪ್ರಾಗೆ ಅಭಿನಂದನೆಗಳು. ಇದು ಭಾರತೀಯ ಕ್ರೀಡೆಗಳಿಗೆ ವಿಶೇಷ ಕ್ಷಣವಾಗಿದೆ. ನೀರಜ್ ಅವರ ಮುಂಬರುವ ಪ್ರಯತ್ನಗಳಿಗೆ ಶುಭಾಶಯಗಳು” ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.

 

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top