ಬೆಂಗಳೂರು: ಆಗಸ್ಟ್ 15 ರಂದು ದೇಶದ 75ನೇ ಸ್ವಾತಂತ್ರ್ಯೋತ್ಸವ ಹಾಗೂ ಬಿಎಂಟಿಸಿ ಸಂಸ್ಥೆಯ ರಜತ ಮಹೋತ್ಸವದ ಅಂಗವಾಗಿ ಬಿಎಂಟಿಸಿ ಬಸ್ ಉಚಿತವಾಗಿ ಪ್ರಯಾಣಿಸಲಿದೆ.
“ಆಗಸ್ಟ್ 15 ರಂದು ಬಿಎಂಟಿಸಿ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಪ್ರಸ್ತಾವನೆಗೆ ಮುಖ್ಯಮಂತ್ರಿಗಳು ಅನುಮೋದನೆ ನೀಡಿದ್ದಾರೆ. ಸಾರ್ವಜನಿಕರು ಒಂದು ದಿನದ ಮಟ್ಟಿಗೆ ವೋಲ್ವೋ ಸೇರಿದಂತೆ ಎಲ್ಲಾ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು” ಎಂದು ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ ತಿಳಿಸಿದ್ದಾರೆ.
ಅಲ್ಲದೆ, ಆಗಸ್ಟ್ 14ರಂದು 300 ಎಲೆಕ್ಟ್ರಿಕ್ ಬಸ್ಸುಗಳನ್ನು ಕೂಡ ಲೋಕಾರ್ಪಣೆ ಮಾಡಲಾಗುತ್ತಿದೆ. ವಿಧಾನಸೌಧದ ಪೂರ್ವ ದ್ವಾರದಲ್ಲಿ ಬಸ್ಗಳನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸಲಾಗುವುದು ಎಂದು ನಂದೀಶ್ ರೆಡ್ಡಿ ಅವರು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.