ನವದೆಹಲಿ: 17ನೇ ಪ್ರವಾಸಿ ಭಾರತೀಯ ದಿವಸ್ 2023 ಮುಂದಿನ ವರ್ಷ ಜನವರಿಯಲ್ಲಿ ಇಂದೋರ್ನಲ್ಲಿ ನಡೆಯಲಿದೆ.
ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಟ್ವೀಟ್ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ” ಕಾನ್ಸುಲರ್, ಪಾಸ್ಪೋರ್ಟ್ ಮತ್ತು ವೀಸಾ ವಿಭಾಗದ ಕಾರ್ಯದರ್ಶಿ ಔಸಾಫ್ ಸಯೀದ್ ಮತ್ತು ಮಧ್ಯಪ್ರದೇಶದ ಮುಖ್ಯ ಕಾರ್ಯದರ್ಶಿ ಇಕ್ಬಾಲ್ ಸಿಂಗ್ ಬೈನ್ಸ್ ಅವರು ಪ್ರವಾಸಿ ಭಾರತೀಯ ದಿವಸ್ ಅನ್ನು ಆಯೋಜಿಸುವ ತಿಳುವಳಿಕೆ ಪತ್ರಕ್ಕೆ ಸಹಿ ಹಾಕಿದ್ದಾರೆ” ಎಂದಿದ್ದಾರೆ.
ಈ ಸಂದರ್ಭದಲ್ಲಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಕೂಡ ಉಪಸ್ಥಿತರಿದ್ದರು.
ಭಾರತದ ಅಭಿವೃದ್ಧಿಯಲ್ಲಿ ಸಾಗರೋತ್ತರ ಭಾರತೀಯ ಸಮುದಾಯದ ಕೊಡುಗೆಯನ್ನು ಗುರುತಿಸಲು ಪ್ರತಿ ವರ್ಷ ಜನವರಿ 9 ರಂದು ಪ್ರವಾಸಿ ಭಾರತೀಯ ದಿವಸ್ ಅನ್ನು ಆಚರಿಸಲಾಗುತ್ತದೆ.
9 ಜನವರಿ 1915 ರಂದು ಮಹಾತ್ಮ ಗಾಂಧಿಯವರು ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಹಿಂದಿರುಗಿದ ಸ್ಮರಣಾರ್ಥವಾಗಿ ಇದನ್ನು ಆಚರಿಸಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.