ಬೆಂಗಳೂರು: ಸೆಪ್ಟೆಂಬರ್ 12ರಿಂದ 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಈ ಬಾರಿ ವಿಧಾನಸೌಧದಲ್ಲಿ 10 ದಿನಗಳ ಕಾಲ ಅಧಿವೇಶನ ನಡೆಯಲಿದೆ ಎಂದು ಸಚಿವ ಆರ್ ಅಶೋಕ್ ಅವರು ಸಂಪುಟ ಸಭೆಯ ಬಳಿಕ ಮಾಹಿತಿ ನೀಡಿದ್ದಾರೆ.
ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘ ಮಾಡಿರುವ ಕಮಿಷನ್ ಆರೋಪ, ಅಲ್ಲಲ್ಲಿ ನಡೆಯುತ್ತಿರುವ ಕೋಮು ಸಂಘರ್ಷಗಳು ಈ ಬಾರಿಯ ಅಧಿವೇಶನದಲ್ಲಿ ಹೆಚ್ಚು ಸುದ್ದಿ ಮಾಡುವ ನಿರೀಕ್ಷೆ ಇದೆ.
40% ಲಂಚ ಆರೋಪವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಪಕ್ಷ ಆಡಳಿತರೂಢ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸುವ ಎಲ್ಲಾ ಸಾಧ್ಯತೆ ಇವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.