ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ನಿನ್ನೆ ಇಂಡೋನೇಷ್ಯಾದ ಬಾಲಿಯಲ್ಲಿ ದಕ್ಷಿಣ ಆಫ್ರಿಕಾದ ಉನ್ನತ ಶಿಕ್ಷಣ, ವಿಜ್ಞಾನ ಮತ್ತು ಇನ್ನೋವೇಶನ್ ಸಚಿವ ಡಾ. ಬೊಂಗಿಂಕೋಸಿ ಇಮ್ಯಾನುಯೆಲ್ “ಬ್ಲೇಡ್” ಎನ್ಜಿಮಾಂಡೆ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು.
ಶೈಕ್ಷಣಿಕ ಮತ್ತು ಕೌಶಲ್ಯ ಅಭಿವೃದ್ಧಿ ಪಾಲುದಾರಿಕೆ ಮತ್ತು ದ್ವಿಪಕ್ಷೀಯ ಶಿಕ್ಷಣ ಸಹಕಾರವನ್ನು ಬಲಪಡಿಸುವ ಕುರಿತು ಇಬ್ಬರೂ ಸಚಿವರು ಫಲಪ್ರದ ಚರ್ಚೆ ನಡೆಸಿದರು ಎಂದು ಶಿಕ್ಷಣ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಉನ್ನತ ಶಿಕ್ಷಣ ಸಂಸ್ಥೆಗಳು ಮತ್ತು ಕೌಶಲ್ಯ ಸಂಸ್ಥೆಗಳ ನಡುವಿನ ಸಂಬಂಧಕ್ಕಾಗಿ ಸಾಂಸ್ಥಿಕ ಕಾರ್ಯವಿಧಾನಗಳನ್ನು ಅಭಿವೃದ್ಧಿಪಡಿಸಲು, ಕೌಶಲ್ಯ ಅರ್ಹತೆಗಳ ಪರಸ್ಪರ ಗುರುತಿಸುವಿಕೆ ಮತ್ತು ಕೌಶಲ್ಯ ಅಭಿವೃದ್ಧಿಯಲ್ಲಿ ಸಾಮರ್ಥ್ಯ ವೃದ್ಧಿಗೆ ಅವರು ಒಪ್ಪಿಕೊಂಡರು ಎಂದಿದೆ.
ಈಗಾಗಲೇ ಅಸ್ತಿತ್ವದಲ್ಲಿರುವ ಸಹಕಾರವನ್ನು ಮತ್ತಷ್ಟು ವಿಸ್ತರಿಸಲು ಮತ್ತು ಶಿಕ್ಷಣದಲ್ಲಿ ದ್ವಿಪಕ್ಷೀಯ ಸಹಕಾರದ ಸಂಪೂರ್ಣ ಸಾಮರ್ಥ್ಯವನ್ನು ಅರಿತುಕೊಳ್ಳಲು ಉಭಯ ದೇಶಗಳ ನಡುವೆ ಶಿಕ್ಷಣದ ಕುರಿತು ಜಂಟಿ ಕಾರ್ಯಕಾರಿ ಗುಂಪನ್ನು ಸ್ಥಾಪಿಸಲು ಇಬ್ಬರೂ ಸಚಿವರು ನಿರ್ಧರಿಸಿದರು ಎಂದಿದೆ.
India and South Africa relations are close and friendly and is rooted in shared values and interests.
Thank HE Dr NZIMANDE for his keenness to deepen our engagements in education & skill development and for his support to India’s presidency in furthering the G20 EdWG agenda. pic.twitter.com/9isWwlYMFx
— Dharmendra Pradhan (@dpradhanbjp) August 31, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.