ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಇಂದು ಕರ್ನಾಟಕಕ್ಕೆ ಆಗಮಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಸಭೆ ನಡೆಸಿದರು. ವೃತ್ತಿಪರ ಏಜೆನ್ಸಿಗಳು ಸೂಚಿಸಿದ ವಿಚಾರಗಳ ಬಗ್ಗೆ ಚಿಂತನ ಮಂಥನ ನಡೆಸಿದರು.
ನಿತಿನ್ ಗಡ್ಕರಿ ಅವರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಬಂಧಿಸಿದ ಬೇಡಿಕೆಗಳು/ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಪ್ರಸ್ತಾವನೆಗಳನ್ನು ಸಲ್ಲಿಸುವಂತೆ ರಾಜ್ಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು ಮತ್ತು ರಾಜ್ಯಕ್ಕೆ ಎಂಒಆರ್ ಟಿಎಚ್ ನ ಸಂಪೂರ್ಣ ಬೆಂಬಲದ ಭರವಸೆ ನೀಡಿದರು.
ಸಂಚಾರದ ತೊಂದರೆಗಳನ್ನು ಪರಿಹರಿಸಲು ಬಸ್-ನಿಲ್ದಾಣಗಳು, ಅಂತರ್-ಮಾದರಿ ನಿಲ್ದಾಣಗಳು ಮತ್ತು ಪಾರ್ಕಿಂಗ್ ಪ್ಲಾಜಾಗಳನ್ನು ರಚಿಸುವ ಆಯ್ಕೆಗಳನ್ನು ಅನ್ವೇಷಿಸುವ ಬಗ್ಗೆಯೂ ಸಚಿವರು ಸಲಹೆ ನೀಡಿದರು.
ಈ ಸಭೆಯಲ್ಲಿ ಕೇಂದ್ರದ ರಾಜ್ಯ ಸಾರಿಗೆ ಸಚಿವ ವಿ.ಕೆ.ಸಿಂಗ್, ರಾಜ್ಯ ಸಾರಿಗೆ ಸಚಿವ ಬಿ.ಶ್ರೀರಾಮುಲು, ರಾಜ್ಯ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್, ರಾಜ್ಯ ಸಂಸದರಾದ ಪಿ.ಸಿ.ಮೋಹನ್ ಮತ್ತು ತೇಜಸ್ವಿ ಸೂರ್ಯ ಮತ್ತು ಕೇಂದ್ರ ಮತ್ತು ರಾಜ್ಯ ಅಧಿಕಾರಿಗಳು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.