ಕೋಲ್ಕತ್ತಾ: ಮೊಬೈಲ್ ಗೇಮಿಂಗ್ ಆ್ಯಪ್ಗಳ ಹಣಕಾಸು ವಹಿವಾಟಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳ ತಂಡ ಶನಿವಾರ ಕೋಲ್ಕತಾದ 6 ಕಡೆಗಳಲ್ಲಿ ದಾಳಿ ನಡೆಸಿದ್ದು, 17 ಕೋಟಿ ರೂಪಾಯಿ ನಗದು ಹಾಗೂ ಮಹತ್ವದ ದಾಖಲೆ ಪತ್ರಗಳನ್ನು ಜಪ್ತಿ ಮಾಡಿದೆ ಎಂದು ಮೂಲಗಳು ತಿಳಿಸಿವೆ.
ಕೋಲ್ಕತ್ತಾ ಮೂಲದ ಮೊಬೈಲ್ ಗೇಮಿಂಗ್ ಆ್ಯಪ್ ಕಂಪನಿ ಸ್ಥಾಪಕಮಿ ಅಮೀರ್ ಖಾನ್ ನಿವಾಸದ ಮೇಲೆ ಈ ದಾಳಿ ನಡೆದಿದ್ದು, ಇಲ್ಲಿಯವರೆಗೆ 17.32 ಕೋಟಿ ರೂ.ಗಳನ್ನು ವಶಪಡಿಸಿಕೊಳ್ಳಲಾದೆ. ಇನ್ನೂ ಹಣದ ಕಂತೆ ಎಣಿಕೆ ಕಾರ್ಯ ನಡೆಯುತ್ತಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
“ಜಾರಿ ನಿರ್ದೇಶನಾಲಯ ‘ಇ-ನಗ್ಗೆಟ್ಸ್’ ಗೇಮಿಂಗ್ ಆ್ಯಪ್ ಹಾಗೂ ಅದರ ಪ್ರವರ್ತಕ ಆಮೀರ್ ಖಾನ್ ಅವರಿಗೆ ಸೇರಿದ 6 ಸ್ಥಳಗಳ ಮೇಲೆ ಶೋಧ ನಡೆಸುತ್ತಿದೆ. ಅಲ್ಲದೇ, ಆ್ಯಪ್ಗೆ ಚೀನಾ ಮೂಲದ ನಂಟಿನ ಬಗ್ಗೆಯೂ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಇತ್ತೀಚೆಗೆ ಸೆರೆಯಾದ ಚೀನಾ ಮೂಲದ ‘ಸಾಲದ ಆ್ಯಪ್’ ಆರೋಪಿಗಳಿಗೂ ಹಾಗೂ ಗೇಮಿಂಗ್ ಆ್ಯಪ್ಗೂ ಇರುವ ಸಂಬಂಧದ ಬಗ್ಗೆ ಇಡಿ ತನಿಖೆ ನಡೆಸುತ್ತಿದೆ” ಎಂದು ಮೂಲಗಳು ತಿಳಿಸಿವೆ
ಆರಂಭದಲ್ಲಿ ಆ್ಯಪ್ ಬಳಕೆದಾರರರಿಗೆ ಠೇವಣಿ ಮೇಲೆ ಭಾರಿ ಕಮಿಷನ್ ನೀಡುವ ಆಮಿಷವೊಡ್ಡಿ ದೊಡ್ಡ ಮೊತ್ತದಲ್ಲಿ ಹಣ ಸಂಗ್ರಹಿಸಿ, ವಾಪಸ್ ನೀಡದೇ ವಂಚಿಸಲಾಗಿದೆ. ಈ ಬಗ್ಗೆ ಅನೇಕರಿಂದ ದೂರುಗಳು ಬಂದಿದ್ದು ಇಡಿ ತನಿಖೆ ನಡೆಸುತ್ತಿದೆ ಎನ್ನಲಾಗಿದೆ.
#WATCH | Kolkata, WB: Stacks of cash amounting to several crores have been recovered from the residence of businessman Nisar Khan during ED's raid ongoing for several hours pic.twitter.com/o2qXzNSmDR
— ANI (@ANI) September 10, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.