ನವದೆಹಲಿ: ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ಅವರು ಡಿಜಿಟಲ್ ಪಾವತಿ, ನೈರ್ಮಲ್ಯ, ವ್ಯಾಕ್ಸಿನೇಷನ್ ಡ್ರೈವ್, ಮಹಿಳಾ ಸಬಲೀಕರಣ ಇತ್ಯಾದಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಉಪಕ್ರಮಗಳನ್ನು ಶ್ಲಾಘಿಸಿದ್ದಾರೆ.
ಟಿವಿ ಚಾನೆಲ್ಗೆ ನೀಡಿದ ಸಂದರ್ಶನದಲ್ಲಿ ಅವರು, ಭಾರತದಲ್ಲಿ ಮಹಿಳಾ ಸ್ವ-ಸಹಾಯ ಗುಂಪುಗಳು ಮತ್ತು ಡಿಜಿಟಲ್ ಸಬಲೀಕರಣದಲ್ಲಿ ಅನೇಕ ಮಹತ್ತರ ಕೆಲಸಗಳನ್ನು ಮಾಡಬಹುದು ಎಂಬುದಕ್ಕೆ ಭಾರತವು ಉದಾಹರಣೆಯಾಗಿದೆ ಎಂದಿದ್ದಾರೆ.
ಭಾರತದಲ್ಲಿ ಹಲವಾರು ಕೆಲಸಗಳನ್ನು ಉತ್ತಮವಾದ ರೀತಿಯಲ್ಲಿ ಮಾಡಲಾಗಿದೆ ಮತ್ತು ಪ್ರಪಂಚದ ಉಳಿದ ಭಾಗಗಳು ಭಾರತದ ನಾಯಕತ್ವದ ಕ್ರಮಗಳಿಂದ ಕಲಿಯುತ್ತಿವೆ ಎಂದು ಹೇಳಿದ್ದಾರೆ.
ಭಾರತವು ತನ್ನ ಸ್ಥಾನದ ದೃಷ್ಟಿಯಿಂದ ವಿಶ್ವದಲ್ಲಿ ಅತ್ಯಂತ ಮಹತ್ವದ ಜಾಗ ಪಡೆದಿದೆ ಎಂದು ಅವರು ಬಣ್ಣಿಸಿದ್ದಾರೆ. ಭಾರತದಲ್ಲಿ ಸೌರಶಕ್ತಿಯ ಹೆಚ್ಚಿದ ಬಳಕೆ ಮತ್ತು ಕಂಪನಿಗಳು ಅದರಲ್ಲಿ ಭಾರಿ ಹೂಡಿಕೆ ಮಾಡುತ್ತಿರುವುದು ಸಂತಸ ತಂದಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.