ಬೆಂಗಳೂರು: ಕನ್ನಡವನ್ನು ಅಧಿಕೃತ ಭಾಷೆಯಾಗಿ ಎಲ್ಲಾ ಹಂತಗಳಲ್ಲಿ ಅನುಷ್ಠಾನಗೊಳಿಸಲು ಶಾಸನಾತ್ಮಕ ಬಲ ತುಂಬುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಗುರುವಾರ ವಿಧಾನಸಭೆಯಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕವನ್ನು ಮಂಡಿಸಿದೆ.
ವಿವಿಧ ಹಂತಗಳಲ್ಲಿ ಕನ್ನಡದ ಸಮಗ್ರ ಅಭಿವೃದ್ಧಿ ಮತ್ತು ಉತ್ತೇಜನಕ್ಕೆ ವ್ಯಾಪಕ ಕ್ರಮಗಳನ್ನು ಕೈಗೊಳ್ಳಲು ಈ ಮಸೂದೆ ಅನುವು ಮಾಡಿಕೊಡಲಿದೆ. ಅಲ್ಲದೇ ಇದು ಉನ್ನತ ಶಿಕ್ಷಣ ಮತ್ತು ವೃತ್ತಿಪರ ಕೋರ್ಸ್ಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ಮತ್ತು ಸ್ಥಳೀಯರಿಗೆ ಉದ್ಯೋಗ ನೀಡುವ ಕೈಗಾರಿಕೆಗಳಿಗೆ ರಿಯಾಯಿತಿ ಅಥವಾ ಅನುದಾನಕ್ಕೆ ಅವಕಾಶ ಕಲ್ಪಿಸುತ್ತದೆ.
ಈ ಮಸೂದೆಯನ್ನು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನೀಲ್ ಕುಮಾರ್ ಅವರು ವಿಧಾನಸಭೆಯಲ್ಲಿ ಮಂಡಿಸಿದ್ದಾರೆ.
ರಾಜ್ಯ ಅಥವಾ ಸ್ಥಳೀಯ ಪ್ರಾಧಿಕಾರಗಳು ತಮ್ಮ ಎಲ್ಲಾ ಅಧಿಕೃತ ಹಾಗೂ ಆಡಳಿತಾತ್ಮಕ ಉದ್ದೇಶಗಳಿಗಾಗಿ ಮತ್ತು ಪತ್ರವ್ಯವಹಾರಕ್ಕಾಗಿ ಕನ್ನಡ ಭಾಷೆಯನ್ನು ಬಳಸುವುದು ಮಸೂದೆ ಕಡ್ಡಾಯಗೊಳಿಸುತ್ತದೆ.
Stressing the need to give priority to Kannada & Kannadigas in Education, Employment, technology & Communication, Kannada Language Comprehensive Development Bill passed in the Assembly. It emphasises on teaching Kannada to non-Kannadigas working in #Karnataka.@NewIndianXpress
— Ashwini M Sripad/ಅಶ್ವಿನಿ ಎಂ ಶ್ರೀಪಾದ್🇮🇳 (@AshwiniMS_TNIE) September 22, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.