ನವದೆಹಲಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI)ದ ಅಧಿಕೃತ ಟ್ವಿಟರ್ ಖಾತೆಯನ್ನು ಸ್ಥಗಿತಗೊಳಿಸಲಾಗಿದೆ. ಸಂಘಟನೆಯನ್ನು ನಿಷೇಧಿಸಿದ ಬಳಿಕ ಕಾನೂನಿನ ಪ್ರಕ್ರಿಯೆಗೆ ಅನುಗುಣವಾಗಿ ಖಾತೆಯನ್ನು ತಡೆಹಿಡಿಯಲಾಗಿದೆ.
ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ ಅಥವಾ UAPA ಅಡಿಯಲ್ಲಿ ಪಿಎಫ್ಐ ಮತ್ತು ಅದರ ಎಂಟು ಅಂಗಸಂಸ್ಥೆಗಳ ವೆಬ್ಸೈಟ್ಗಳು ಮತ್ತು ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸುವ ಸಲುವಾಗಿ ಕೇಂದ್ರವು ಸೂಚನೆಯನ್ನು ನೀಡಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ.
ದೂರಸಂಪರ್ಕ ಇಲಾಖೆಯು ತನ್ನ ಅಧಿಕೃತ ವೆಬ್ಸೈಟ್ಗಳು, ಟ್ವಿಟರ್, ಫೇಸ್ಬುಕ್, ಇನ್ಸ್ಟಾಗ್ರಾಮ್ ಹ್ಯಾಂಡಲ್ಗಳು, ಯೂಟ್ಯೂಬ್ ಚಾನೆಲ್ಗಳು ಅಥವಾ ಯಾವುದೇ ಇತರ ಆನ್ಲೈನ್ ವೇದಿಕೆಯಲ್ಲಿ ರಿಹಬ್ ಇಂಡಿಯಾ ಫೌಂಡೇಶನ್ (ಆರ್ಐಎಫ್), ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್ಐ), ಆಲ್ ಇಂಡಿಯಾ ಇಮಾಮ್ ಕೌನ್ಸಿಲ್ (AIIC), ನ್ಯಾಷನಲ್ ಕಾನ್ಫೆಡರೇಶನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಶನ್ (NCHRO), ನ್ಯಾಷನಲ್ ವುಮೆನ್ಸ್ ಫ್ರಂಟ್, ಜೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಶನ್ ಮತ್ತು ರೆಹಬ್ ಫೌಂಡೇಶನ್ (ಕೇರಳ)ಗಳಲ್ಲಿ ಪಿಎಫ್ಐ ಪೋಸ್ಟ್ ಮಾಡಿದ ವಿಷಯಗಳನ್ನು ನಿರ್ಬಂಧಿಸಲು ಆದೇಶಿಸಿದೆ.
ಆದೇಶದ ಭಾಗವಾಗಿ, ಪಿಎಫ್ಐ ಯಾವುದೇ ಅಧಿಕೃತ ಚಾನಲ್ ಮೂಲಕ ಯಾವುದೇ ಪತ್ರಿಕಾ ಹೇಳಿಕೆಗಳನ್ನು ನೀಡಲು ಸಾಧ್ಯವಾಗುವುದಿಲ್ಲ. ಇದರೊಂದಿಗೆ, ಪಿಎಫ್ಐ, ಸಿಎಫ್ಐ, ಆರ್ಐಎಫ್ ಮತ್ತು ಇತರ ಅಂಗಸಂಸ್ಥೆಗಳಿಗೆ ಲಿಂಕ್ ಮಾಡಲಾದ ಅಧಿಕೃತ ವಾಟ್ಸಾಪ್ ಖಾತೆಗಳನ್ನು ಮೇಲ್ವಿಚಾರಣೆ ಮಾಡಲಾಗುತ್ತದೆ ಮತ್ತು ಯಾವುದೇ ದೇಶ ವಿರೋಧಿ ಚಟುವಟಿಕೆಗೆ ಕಾನೂನು ಕ್ರಮ ಜರುಗಿಸಲಾಗುವುದು. ಯಾವುದೇ ಹೊಸ ಪ್ರಾಕ್ಸಿ ಸಾಮಾಜಿಕ ಮಾಧ್ಯಮ ಹ್ಯಾಂಡಲ್ಗಳನ್ನು ರಚಿಸಿದರೆ, ಅವುಗಳನ್ನು ಸಹ ನಿರ್ಬಂಧಿಸಬಹುದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.