ನವದೆಹಲಿ: ದೇಶದ ಕೇಂದ್ರ ಗ್ರಂಥಾಲಯಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಬಗೆಗಿನ ಹೆಚ್ಚು ಹೆಚ್ಚು ಪುಸ್ತಕಗಳನ್ನು ಲಭ್ಯವಾಗುವಂತೆ ಮಾಡಲು ಕೇಂದ್ರ ಸರ್ಕಾರ ಯೋಜನೆ ರೂಪಿಸಿದೆ.
ಮೋದಿ ಮಾತ್ರವಲ್ಲದೇ ವೀರ ಸಾವರ್ಕರ್, ಸುಭಾಷ್ ಚಂದ್ರ ಬೋಸ್ ಮತ್ತು ಮೌಲಾನಾ ಅಬ್ದುಲ್ ಕಲಾಂ ಆಜಾದ್ ಅವರ ಬಗೆಗಿನ ಹೆಚ್ಚು ಪುಸ್ತಕಗಳು ಕೇಂದ್ರ ಗ್ರಂಥಾಲಯದಲ್ಲಿ ಲಭ್ಯವಿರುವಂತೆ ನೊಡಿಕೊಳ್ಳಲು ಸರ್ಕಾರ ಮುಂದಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಕೇಂದ್ರ ಸಂಸ್ಕೃತಿ ಸಚಿವ ಮಹೇಶ್ ಶರ್ಮಾ, ‘ಮೋದಿಯವರು ಆಧುನಿಕ ಭಾರತದ ಭಾಗವಲ್ಲವೇ? ಮತ್ಯಾಕೆ ಅವರ ಬಗೆಗಿನ ಪುಸ್ತಕಗಳು ಕೇಂದ್ರ ಗ್ರಂಥಾಲಯದ ಭಾಗವಾಗಬಾರದು?..ಇನ್ನು ಮುಂದೆ ಅವರ ಬಗೆಗಿನ ಹೆಚ್ಚಿನ ಪುಸ್ತಕಗಳು ಲಭ್ಯವಾಗಲಿದೆ. ಅದರೊಂದಿಗೆ ಬೋಸ್, ಸಾರ್ವಕರ್, ಮೌಲಾನಾ ಆಝಾದ್ ಅವರ ಬಗೆಗಿನ ಪುಸ್ತಕಗಳೂ ಹೆಚ್ಚಿನ ಪ್ರಮಾಣದಲ್ಲಿ ಲಭ್ಯವಾಗಲಿದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.