ಬೆಂಗಳೂರು: ಇಂದು ಪೊಲೀಸ್ ಸಂಸ್ಮರಣಾ ದಿನವನ್ನು ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನಲ್ಲಿ ರಾಜ್ಯ ಪೊಲೀಸ್ ಇಲಾಖೆಯ ವತಿಯಿಂದ ಆಯೋಜಿಸಿರುವ “ಪೊಲೀಸ್ ಸಂಸ್ಮರಣಾ ದಿನಾಚರಣೆ” ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹುತಾತ್ಮರಿಗೆ ಗೌರವ ಸಮರ್ಪಣೆ ಮಾಡಿದರು.
ಈ ಸಮಾರಂಭದಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಗೌರವ ವಂದನೆ ಸಲ್ಲಿಸಿದರು.
ಸಮಾರಂಭದಲ್ಲಿ ಮಾತನಾಡಿದ ಸಿಎಂ, “ದೇಶದೊಳಗೆ ಶಾಂತಿ ಕಾಪಾಡಲು ಹಾಗೂ ಕಾನೂನು ಸುವ್ಯವಸ್ಥೆಯನ್ನು ಬಲಪಡಿಸಲು ಪೊಲೀಸರ ಕರ್ತವ್ಯ ಶ್ಲಾಘನೀಯ. ಹಗಲು ರಾತ್ರಿಯೆನ್ನದೇ ಕರ್ತವ್ಯ ನಿರ್ವಹಿಸುತ್ತಿರುವ ವೇಳೆಯಲ್ಲಿ ನಮ್ಮ ನಾಡು ಹಲವಾರು ದಕ್ಷ ಪೊಲೀಸರನ್ನು ಕಳೆದುಕೊಂಡಿದೆ.ಅವರ ತ್ಯಾಗ ಮತ್ತು ಬಲಿದಾನಗಳು ಬೆಲೆಕಟ್ಟಲಾಗದಂತಹದ್ದು” ಎಂದಿದ್ದಾರೆ.
ನಮ್ಮ ರಾಜ್ಯ ಪೊಲೀಸರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದರ ಜೊತೆ ಜೊತೆಗೆ ಅತಿ ಹೆಚ್ಚು ಗೌರವ ನೀಡುವ ರಾಜ್ಯಗಳಲ್ಲಿ ಮೊದಲ ಸ್ಥಾನದಲ್ಲಿದೆ ಎಂದರು.
ಪೊಲೀಸರ ಮೇಲಿನ ಕಾರ್ಯದ ಒತ್ತಡವನ್ನು ಕೂಲಂಕಷವಾಗಿ ಗಮನಿಸಿ, ಹೆಚ್ಚೆಚ್ಚು ಪೊಲೀಸ್ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳುವ ಮೂಲಕ ಹಾಲಿ ಇರುವ ಪೊಲೀಸರ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ಟ್ವಿಟ್ ಮಾಡಿರುವ ಮುಖ್ಯಮಂತ್ರಿಗಳು, “ಇಂದು ಬೆಂಗಳೂರಿನಲ್ಲಿ ರಾಜ್ಯ ಪೊಲೀಸ್ ಇಲಾಖೆಯ ವತಿಯಿಂದ ಆಯೋಜಿಸಿರುವ “ಪೊಲೀಸ್ ಸಂಸ್ಮರಣಾ ದಿನಾಚರಣೆ” ಕಾರ್ಯಕ್ರಮದಲ್ಲಿ ಪಾಲ್ಗೊಂಡು ಹುತಾತ್ಮರಿಗೆ ಗೌರವ ಸಮರ್ಪಣೆ ಮಾಡಲಾಯಿತು” ಎಂದಿದ್ದಾರೆ.
ಇಂದು ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಪೊಲೀಸ್ ಸಂಸ್ಮರಣಾ ದಿನವನ್ನು ಆಚರಣೆ ಮಾಡಲಾಯಿತು.
ಇಂದು ಬೆಂಗಳೂರಿನಲ್ಲಿ ರಾಜ್ಯ ಪೊಲೀಸ್ ಇಲಾಖೆಯ ವತಿಯಿಂದ ಆಯೋಜಿಸಿರುವ “ಪೊಲೀಸ್ ಸಂಸ್ಮರಣಾ ದಿನಾಚರಣೆ” ಕಾರ್ಯಕ್ರಮದಲ್ಲಿ ಪಾಲ್ಗೊಂಡು ಹುತಾತ್ಮರಿಗೆ ಗೌರವ ಸಮರ್ಪಣೆ ಮಾಡಲಾಯಿತು.#PoliceCommemorationDay2022 pic.twitter.com/HrJqLZbrS5
— Basavaraj S Bommai (@BSBommai) October 21, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.