ಕೋಲ್ಕತ್ತಾ: ಸ್ವಾತಂತ್ರ್ಯ ಸೇನಾನಿ ಸುಭಾಷ್ ಚಂದ್ರ ಬೋಸ್ ಅವರಿಗೆ ಸಂಬಂಧಪಟ್ಟ ರಹಸ್ಯ ದಾಖಲೆಗಳನ್ನು ಬಹಿರಂಗಗೊಳಿಸಬೇಕು ಎಂಬ ಕೂಗು ಹಿಂದಿನಿಂದಲೂ ಕೇಳುತ್ತಾ ಬಂದಿದೆ. ಈ ಹಿನ್ನಲೆಯಲ್ಲಿ ಇದೀಗ ಪಶ್ಚಿಮಬಂಗಾಳದ ಮಮತಾ ಬ್ಯಾನರ್ಜಿ ಅವರ ಸರ್ಕಾರ ದಾಖಲೆಗಳನ್ನು ಬಹಿರಂಗಪಡಿಸಲು ಮುಂದಾಗಿದೆ.
ಸೆ.18ರಂದು ಕೋಲ್ಕತ್ತಾ ಮ್ಯೂಸಿಯಂನಲ್ಲಿ ಬೋಸ್ ಅವರಿಗೆ ಸಂಬಂಧಪಟ್ಟ 64 ಕಡತಗಳನ್ನು ಬಹಿರಂಗಪಡಿಸಲಿದ್ದೇವೆ ಎಂದು ಸ್ವತಃ ಮಮತಾ ಬ್ಯಾನರ್ಜಿ ಅವರೇ ಹೇಳಿದ್ದಾರೆ.
ಅಲ್ಲದೇ 1937 ರಿಂದ 1947ರವರೆಗಿನ ಎಲ್ಲಾ ಕಡತಗಳನ್ನು ಡಿಜಟಲೀಕರಣಗೊಳಿಸುವುದಾಗಿ ಅವರು ಹೇಳಿದ್ದಾರೆ.
ಮಮತಾ ಅವರ ನಿರ್ಧಾರವನ್ನು ಬೋಸ್ ಸೋದರ ಮೊಮ್ಮಗ ಚಂದ್ರ ಬೋಸ್ ಅವರು ಸ್ವಾಗತ ಮಾಡಿದ್ದು, ಇದೇ ರೀತಿ ಕೇಂದ್ರದ ಎನ್ಡಿಎ ಸರ್ಕಾರ ಕೂಡ ಬೋಸ್ ಅವರಿಗೆ ಸಂಬಂಧಪಟ್ಟ 135 ಕಡತಗಳನ್ನು ಬಹಿರಂಗಪಡಿಸಬೇಕು ಎಂದು ಕೇಳಿಕೊಂಡಿದ್ದಾರೆ.
ನೇತಾಜಿ ಅವರ ಹಿಂದಿನ ಸತ್ಯಗಳ ಬಗ್ಗೆ ಜನರಿಗೆ ತಿಳಿಯಬೇಕು, ಅವರ ಕುಟುಂಬ ಸದಸ್ಯರನ್ನೂ ಒಳಗೊಂಡ ಸಮಿತಿಯನ್ನು ರಚಿಸಿ ಈ ಎಲ್ಲಾ ದಾಖಲೆಗಳ ಬಗ್ಗೆ ತನಿಖೆ ಮಾಡಬೇಕು. ಇಂಗ್ಲೆಂಡ್ನಲ್ಲಿ ಕೂಡ ನೇತಾಜೀಗೆ ಸಂಬಂಧಪಟ್ಟ ದಾಖಲೆಗಳಿವೆ ಎಂದು ಅಲ್ಲಿನ ಸರ್ಕಾರ ಹೇಳಿಕೊಂಡಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅಲ್ಲಿನ ಸರ್ಕಾರದೊಂದಿಗೆ ಮಾತನಾಡಿ ಕಡತಗಳನ್ನು ಭಾರತಕ್ಕೆ ತರಬೇಕು ಎಂದು ಅವರು ಕೇಳಿಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.