
ಬೆಂಗಳೂರು: ದಿವಂಗತ ನಟ ಪುನೀತ್ ರಾಜ್ಕುಮಾರ್ ಅವರ ಬಗೆಗಿನ ಪಾಠವನ್ನು ಶಾಲಾ ಪಠ್ಯಕ್ರಮದಲ್ಲಿ ಸೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಪುನೀತ್ ರಾಜ್ಕುಮಾರ್ ಅವರ ಸಾಧನೆಯ ಪಾಠವನ್ನು ಸೇರಿಸಲು ಒತ್ತಾಯಗಳು ಕೇಳಿ ಬರುತ್ತಿವೆ ಎಂದು ಬೊಮ್ಮಾಯಿ ಹೇಳಿದ್ದಾರೆ.
“ಪುನೀತ್ ಗೌರವಾರ್ಥ ಸಾಧ್ಯವಾದುದನ್ನು ನಾವು ಮಾಡುತ್ತೇವೆ. ದಿವಂಗತ ನಟನಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು (ಮರಣೋತ್ತರ) ನೀಡುವುದು ಈ ಕನ್ನಡ ರಾಜ್ಯೋತ್ಸವದ ಪ್ರಮುಖ ಅಂಶವಾಗಿದೆ. ಪುನೀತ್ ರಾಜ್ಕುಮಾರ್ ಅವರು ಮಾನವೀಯ ಕಾರ್ಯಗಳ ವಿಷಯದಲ್ಲಿ ಅದ್ಭುತ ಕೆಲಸ ಮಾಡಿದ್ದಾರೆ” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
“ಪುನೀತ್ ರಾಜ್ಕುಮಾರ್ ತಮ್ಮ ಅಂಗಾಂಗಗಳನ್ನು ದಾನ ಮಾಡಿದ್ದಾರೆ, ಇದು ಅವರ ಸೇವೆಯ ಬಗ್ಗೆ ಹೇಳುತ್ತದೆ. ಅವರ ನಿಧನದ ನಂತರ ಅನೇಕರು ತಮ್ಮ ಕಣ್ಣುಗಳನ್ನು ದಾನ ಮಾಡಲು ಮುಂದೆ ಬಂದಿದ್ದಾರೆ” ಎಂದು ಅವರು ವಿವರಿಸಿದ್ದಾರೆ.
“ಅಲ್ಪಾವಧಿಯ ಜೀವನದಲ್ಲಿ ಪುನೀತ್ ರಾಜ್ಕುಮಾರ್ ಅವರು ಸ್ಪೂರ್ತಿದಾಯಕ ಕೆಲಸ ಮತ್ತು ಸೇವೆಯನ್ನು ಮಾಡಿದ್ದಾರೆ. ಅವರ ಸಂದೇಶವನ್ನು ಮುಂದುವರಿಸಲು ನಾವು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ” ಎಂದು ಮುಖ್ಯಮಂತ್ರಿ ಹೇಳಿದ್ದಾರೆ
ರಾಜ್ಯದಲ್ಲಿ ಕನ್ನಡವನ್ನು “ಕಡ್ಡಾಯ” ಮಾಡಲು ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ತಮ್ಮ ಸರ್ಕಾರ ಕಾನೂನು ತರಲಿದೆ ಎಂದು ಅವರು ಈ ಸಂದರ್ಭದಲ್ಲಿ ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.



