ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ನಾಲ್ವರು ಆರೋಪಿಗಳನ್ನು ಪತ್ತೆ ಹಚ್ಚಲು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಲುಕ್ಔಟ್ ನೋಟಿಸ್ ಹೊರಡಿಸಿದ್ದು, ಅಧಿಕಾರಿಗಳಿಗೆ ಸಹಾಯ ಮಾಡುವವರಿಗೆ ನಗದು ಬಹುಮಾನ ನೀಡುವುದಾಗಿ ತಿಳಿಸಿದೆ.
ತುಫೈಲ್, ಮೊಹಮ್ಮದ್ ಮುಸ್ತಫಾ, ಉಮರ್ ಫಾರೂಕ್ ಮತ್ತು ಅಬುಬುಕರ್ ಸಿದ್ದಿಕ್ ಅವರಿಗಾಗಿ ಎನ್ಐಎ ಬಲೆ ಬೀಸಿದೆ. ತುಫೈಲ್ ಮಡಿಕೇರಿ ಮೂಲದವನಾಗಿದ್ದು, ಉಳಿದ 3 ಆರೋಪಿಗಳು ದಕ್ಷಿಣ ಕನ್ನಡದವರು.
ತಲೆಮರೆಸಿಕೊಂಡಿರುವ ನಾಲ್ವರು ಆರೋಪಿಗಳ ಪತ್ತೆಗೆ ಮಾಹಿತಿ ನೀಡಿದವರಿಗೆ ಒಟ್ಟು 14 ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಲಾಗಿದೆ. ಎಲ್ಲಾ ಆರೋಪಿಗಳು ನಿಷೇಧಿತ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಜೊತೆ ಸಂಪರ್ಕ ಹೊಂದಿದ್ದರು ಎಂದು ಶಂಕಿಸಲಾಗಿದೆ.
ಜುಲೈನಲ್ಲಿ ದಕ್ಷಿಣ ಕನ್ನಡದ ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರನ್ನು ಬೈಕ್ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು ಮಾರಕಾಯುಧಗಳಿಂದ ಕೊಚ್ಚಿ ಕೊಲೆಗೈದಿದ್ದರು. ಈ ಘಟನೆ ರಾಜ್ಯವ್ಯಾಪಿ ಭಾರೀ ಆಕ್ರೋಶವನ್ನುಂಟು ಮಾಡಿದ್ದು, ಸರ್ಕಾರದ ವಿರುದ್ಧ ಅಸಮಾಧಾನ ಭುಗಿಲೆದ್ದಿತ್ತು. ಬಳಿಕ ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸಲಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.