ನವದೆಹಲಿ: ಗುಜರಾತ್ ವಿಧಾನಸಭಾ ಚುನಾವಣೆ 2022 ರ ದಿನಾಂಕಗಳು ಇಂದು ಪ್ರಕಟವಾಗಿದೆ. ಎರಡು ಹಂತಗಳಲ್ಲಿ ಡಿಸೆಂಬರ್ 1 ಮತ್ತು 5 ರಂದು ಚುನಾವಣೆ ನಡೆಯಲಿದೆ. ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ ಎಂದು ಭಾರತ ಚುನಾವಣಾ ಆಯೋಗ (ಇಸಿಐ) ಹೇಳಿದೆ.
ಗುಜರಾತ್ ವಿಧಾನಸಭಾ ಚುನಾವಣೆಯ ಎಣಿಕೆಯ ದಿನಾಂಕವು ಡಿಸೆಂಬರ್ 8 ರಂದು ಹಿಮಾಚಲ ಪ್ರದೇಶದ ಮತ ಎಣಿಕೆಯಂದೇ ನಡೆಯಲಿದೆ. ಡಿಸೆಂಬರ್ 10 ರಂದು ವಿಧಾನಸಭೆ ಚುನಾವಣೆಯ ಸಂಪೂರ್ಣ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಸಿಇಸಿ ರಾಜೀವ್ ಕುಮಾರ್ ತಿಳಿಸಿದ್ದಾರೆ.
ಈ ವರ್ಷ ಗುಜರಾತಿನಲ್ಲಿ 4.9 ಕೋಟಿ ಮತದಾರರು ಮತ ಚಲಾಯಿಸಲು ಅರ್ಹರಾಗಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ 34,000 ಕ್ಕೂ ಹೆಚ್ಚು ಸೇರಿದಂತೆ 51,000 ಕ್ಕೂ ಹೆಚ್ಚು ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಚುನಾವಣೆಗೂ ಮುನ್ನ ಕೇಂದ್ರ ಸರ್ಕಾರ 160 ಕಂಪನಿಗಳ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳನ್ನು ರಾಜ್ಯಕ್ಕೆ ನಿಯೋಜಿಸಿದೆ.
182 ಸದಸ್ಯರ ರಾಜ್ಯ ಅಸೆಂಬ್ಲಿಯ ಅವಧಿಯು ಫೆಬ್ರವರಿ 18, 2023 ರಂದು ಕೊನೆಗೊಳ್ಳುತ್ತದೆ. ಇಂದು ಗುಜರಾತ್ ಚುನಾವಣಾ ದಿನಾಂಕಗಳನ್ನು ಘೋಷಿಸಿದ ಕೂಡಲೇ ಅಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ.
ಕಳೆದ ಬಾರಿ 2017 ರಲ್ಲಿ ಗುಜರಾತ್ನಲ್ಲಿ ಅಸೆಂಬ್ಲಿ ಚುನಾವಣೆಗಳು ನಡೆದಿದ್ದು, ಬಿಜೆಪಿ ಸತತ ಐದನೇ ಬಾರಿ ಅಧಿಕಾರ ಹಿಡಿಯಿತು. ಅಲ್ಲಿನ 182 ಸ್ಥಾನಗಳ ಪೈಕಿ ಕೇಸರಿ ಪಕ್ಷ 99 ಸ್ಥಾನಗಳನ್ನು ಗೆದ್ದಿದ್ದರೆ, ಕಾಂಗ್ರೆಸ್ 77 ಸ್ಥಾನಗಳನ್ನು ಪಡೆದುಕೊಂಡಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.