ಬೆಂಗಳೂರು: ಇಂದು ಸಂಜೆ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ ದೇವಾಲಯಗಳು ಬಂದ್ ಆಗಿವೆ. ಗ್ರಹಣ ಮೋಕ್ಷದ ಬಳಿಕವಷ್ಟೇ ಭಕ್ತರ ದರ್ಶನಕ್ಕೆ ದೇಗುಲಗಳಲ್ಲಿ ಅವಕಾಶ ನೀಡಲಾಗಿದೆ.
ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಭಕ್ತರಿಗೆ ಅವಕಾಶ ಕಲ್ಪಿಸಲಾಗಿತ್ತು. ಆದರೆ ಮಧ್ಯಾಹ್ನದ ನಂತರ ಬಾಗಿಲುಗಳನ್ನು ಮುಚ್ಚಲಾಗಿದೆ.
ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ, ಬೆಂಗಳೂರಿನ ಗವಿ ಗಂಗಾಧರೇಶ್ವರ ದೇವಸ್ಥಾನ, ಕೋಟೆ ವೆಂಕಟೇಶ್ವರ ದೇವಸ್ಥಾನ, ಮಲ್ಲೇಶ್ವರದ ಕಾಡು ಮಲ್ಲಿಕಾರ್ಜುನ ದೇವಸ್ಥಾನ ಸೇರಿದಂತೆ ಹಲವು ದೇವಸ್ಥಾನಗಳಲ್ಲಿ ಗ್ರಹಣ ಸಮಯದಲ್ಲಿ ಬಾಗಿಲು ಮುಚ್ಚಿದೆ.
12 ಗಂಟೆಯ ಬಳಿಕ ದೇವಸ್ಥಾನವನ್ನು ಬಂದ್ ಮಾಡಿ ಸಂಜೆ ಏಳು ಗಂಟೆ ನಂತರ ಬಾಗಿಲು ತೆರೆಯಲಾಗುವುದು, ಶುದ್ಧೀಕರಣ ಮಾಡಿದ ನಂತರ ಭಕ್ತರಿಗೆ ದರ್ಶನ ಅವಕಾಶ ಸಿಗಲಿದೆ ಎಂದು ವರದಿಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.