ನವದೆಹಲಿ: ಭಾರತದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಸುಪ್ರೀಂಕೋರ್ಟ್ನ ಹಿರಿಯ ನ್ಯಾಯಮೂರ್ತಿ ಧನಂಜಯ ವೈ ಚಂದ್ರಚೂಡ್ ಇಂದು ಪ್ರಮಾಣ ವಚನ ಸ್ವೀಕರಿಸಿದರು.
ರಾಷ್ಟ್ರಪತಿ ಭವನದ ಮೆಜೆಸ್ಟಿಕ್ ಲಾನ್ಸ್ನಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಬೋಧಿಸಿದರು.
ನ್ಯಾಯಮೂರ್ತಿ ಚಂದ್ರಚೂಡ್ ಅವರು ನವೆಂಬರ್ 10, 2024 ರವರೆಗೆ ಎರಡು ವರ್ಷಗಳ ಕಾಲ CJI ಆಗಿ ಸೇವೆ ಸಲ್ಲಿಸುತ್ತಾರೆ. ಸುಪ್ರೀಂಕೋರ್ಟ್ ನ್ಯಾಯಾಧೀಶರು 65 ನೇ ವಯಸ್ಸಿನಲ್ಲಿ ನಿವೃತ್ತರಾಗುತ್ತಾರೆ.
ನವೆಂಬರ್ 11, 1959 ರಂದು ಜನಿಸಿದ ನ್ಯಾಯಮೂರ್ತಿ ಚಂದ್ರಚೂಡ್ ಅವರು ಮೇ 13, 2016 ರಂದು ಉಚ್ಛ ನ್ಯಾಯಾಲಯದಲ್ಲಿ ಸೇವೆ ಆರಂಭಿಸಿದರಯ. ಅವರು ಅಯೋಧ್ಯೆ ಭೂ ವಿವಾದಕ್ಕೆ ಸಂಬಂಧಿಸಿದ ವಿಷಯಗಳು ಸೇರಿದಂತೆ ಉನ್ನತ ನ್ಯಾಯಾಲಯದ ಹಲವಾರು ಸಂವಿಧಾನ ಪೀಠಗಳು ಮತ್ತು ಮಹತ್ವದ ತೀರ್ಪುಗಳ ಭಾಗವಾಗಿದ್ದಾರೆ.
Justice DY Chandrachud formally takes oath as the new Chief Justice of India pic.twitter.com/JY0xdSrLEB
— ANI (@ANI) November 9, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.