ಬೆಂಗಳೂರು: ರಾಜ್ಯ ಸರ್ಕಾರವು 7ನೇ ವೇತನ ಆಯೋಗವನ್ನು ರಚಿಸಲು ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಘೋಷಣೆ ಮಾಡಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮತ್ತು ಇತರ ಸೌಲಭ್ಯಗಳ ವಿಸ್ತರಣೆಗೆ ಸಂಬಂಧಿಸಿದಂತೆ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅವರ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗ ರಚನೆಯಾಗಲಿದೆ ಎಂದಿದ್ದಾರೆ.
ಪ್ರಸಕ್ತ ವರ್ಷದ ಅಕ್ಟೋಬರ್ ಅಂತ್ಯದೊಳಗೆ ಏಳನೇ ವೇತನ ಆಯೋಗ ರಚನೆ ಮಾಡಲಿದ್ದೇವೆ ಎಂದಿದ್ದಾರೆ.
“ಎರಡು ದಿನಗಳಲ್ಲಿ ವೇತನ ಆಯೋಗ ರಚನೆ ಮಾಡಲಿದ್ದೇವೆ. ನಂತರ ತ್ವರಿತವಾಗಿ ಮಧ್ಯಂತರ ವರದಿ ನೀಡುವಂತೆ ಸೂಚನೆ ನೀಡುತ್ತೇವೆ. 2023ರ ಮಾರ್ಚ್ ಒಳಗೆ ಆಯೋಗದ ಶಿಫಾರಸುಗಳನ್ನು ಜಾರಿ ಮಾಡಲಾಗುವುದು” ಎಂದಿದ್ದಾರೆ.
ಐದು ವರ್ಷಗಳಿಗೆ ಒಂದು ಬಾರಿ ವೇತನ ಆಯೋಗ ರಚನೆ ಮಾಡಲಾಗುತ್ತದೆ. ಆದರೆ ಇದೇ ಮೊದಲ ಬಾರಿಗೆ ನಾಲ್ಕು ವರ್ಷ ಏಳು ತಿಂಗಳಿಗೆ ಆಯೋಗ ರಚನೆ ಮಾಡಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.