ನವದೆಹಲಿ: 11,000 ಉದ್ಯೋಗಿಗಳನ್ನು ವಜಾ ಮಾಡಲಿರುವ ಮೆಟಾದ ಲೇ-ಆಫ್ ನಿರ್ಧಾರದ ಬಿಸಿ ಭಾರತದಲ್ಲಿನ ಮೆಟಾ ತಂಡಗಳಿಗೂ ತಟ್ಟಿದೆ. ಭಾರತದ ಅನೇಕ ಸಿಬ್ಬಂದಿಗಳು ಕೆಲಸ ಕಳೆದುಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮೆಟಾ ದೇಶದಲ್ಲಿ ಸುಮಾರು 400 ಉದ್ಯೋಗಿಗಳನ್ನು ಹೊಂದಿರುವ ಸಾಧ್ಯತೆಯಿದೆ ಮತ್ತು ಅದರ ವ್ಯವಹಾರವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ.
ಆದರೆ ಮೆಟಾದ ಲೇಆಫ್ ನಿರ್ಧಾರದಿಂದಾಗಿ ಅನೇಕರು ಕೆಲಸ ಕಳೆದುಕೊಂಡಿದ್ದಾರೆ. ಕೆಲಸ ಕಳೆದುಕೊಂಡ ಉದ್ಯೋಗಿಗಳ ನಿಖರ ಸಂಖ್ಯೆಯನ್ನು ಕಂಡುಹಿಡಿಯಲು ಸಾಧ್ಯವಾಗದಿದ್ದರೂ ವಜಾಗೊಳಿಸುವಿಕೆಯು ಮೆಟಾ ಇಂಡಿಯಾ ತಂಡದ ಮೇಲೆ ಪರಿಣಾಮ ಬೀರಿದೆ ಎಂದು ಮೂಲಗಳು ತಿಳಿಸಿವೆ.
ವಜಾಗೊಳಿಸುವ ನಿರ್ಧಾರದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಫೇಸ್ಬುಕ್ ಸಂಸ್ಥಾಪಕ ಮಾರ್ಕ್ ಝುಕನ್ಬರ್ಗ್, ” ಮೆಟಾದ ಇತಿಹಾಸದಲ್ಲೇ ತುಂಬಾ ಕಠಿಣ ನಿರ್ಧಾರ ಕೈಗೊಳ್ಳುತ್ತಿರುವ ಬಗ್ಗೆ ನಾನಿಂದು ಮಾಹಿತಿ ಹಂಚಿಕೊಳ್ಳುತ್ತಿದ್ದೇನೆ. ಕಂಪನಿಯ ಉದ್ಯೋಗಿಗಳ ಪ್ರಮಾಣದಲ್ಲಿ ಶೇಕಡಾ 13ರಷ್ಟನ್ನು ಕಡಿತ ಮಾಡಲು ನಿರ್ಧರಿಸಿದೆ. 11,000ಕ್ಕೂ ಹೆಚ್ಚು ಪ್ರತಿಭಾವಂತ ಉದ್ಯೋಗಿಗಳು ನಮ್ಮ ತಂಡದಿಂದ ಹೊರಹೋಗಬೇಕಿದೆ. ವೆಚ್ಚವನ್ನು ಕಡಿತಗೊಳಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ. ಒಂದನೇ ತ್ರೈಮಾಸಿಕ ಅವಧಿಯಲ್ಲಿ ನೇಮಕಾತಿ ಪ್ರಕ್ರಿಯೆಗೆ ತಡೆ ಹಿಡಿಯಲಾಗಿತ್ತು. ಅದು ಹಾಗೆಯೇ ಮುಂದುವರಿಯಲಿದೆ. ಈ ಮೂಲಕ ಕಂಪನಿಯನ್ನು ಇನ್ನಷ್ಟು ದಕ್ಷವಾಗಿ ಕಾರ್ಯನಿರ್ವಹಿಸುವಂತೆ ಮಾಡಬೇಕಿದೆ” ಎಂದು ಹೇಳಿದ್ದಾರೆ.
ಈ ನಡುವೆ ವಜಾ ಕ್ರಮವಾಗಿ, ಕಂಪನಿಯು 16 ವಾರಗಳ ಮೂಲ ವೇತನವನ್ನು ವಜಾಗೊಂಡವರಿಗೆ ಪಾವತಿಸುತ್ತದೆ ಎಂದು ಜುಕರ್ಬರ್ಗ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.