ನವದೆಹಲಿ: ವಿದೇಶಿ ಮತಗಳಾದ ಇಸ್ಲಾಂ ಮತ್ತು ಕ್ರಿಶ್ಚಿಯನ್ಗೆ ಮತಾಂತರವಾದ ದಲಿತರಿಗೆ ಪರಿಶಿಷ್ಟ ಜಾತಿಯ ಸ್ಥಾನಮಾನ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಇಸ್ಲಾಂ ಮತ್ತು ಕ್ರೈಸ್ಥ ಮತಕ್ಕೆ ಮತಾಂತರವಾದವರಿಗೆ ಪರಿಶಿಷ್ಟ ಜಾತಿಯ ಸ್ಥಾನಮಾನ ನೀಡಿದರೆ ಹಿಂದೂ ಧರ್ಮದಲ್ಲಿನ ಪರಿಶಿಷ್ಟರ ಹಕ್ಕುಗಳಿಗೆ ಧಕ್ಕೆಯಾಗುತ್ತದೆ ಎಂದು ಪ್ರತಿಪಾದಿಸಿದೆ.
ಮತಾಂತರವಾದವರಿಗೆ ಪರಿಶಿಷ್ಟ ಸ್ಥಾನಮಾನ ನೀಡಬೇಕು ಎಂದು ಕೋರಿ ಸ್ವಯಂ ಸೇವಾ ಸಂಸ್ಥೆಯೊಂದು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಈ ಸಂಬಂಧ ಕೇಂದ್ರ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಬೇಕು ಎಂದು ಸುಪ್ರೀಂ ಹೇಳಿತ್ತು.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕೇಂದ್ರ, “ಕ್ರೈಸ್ಥ ಮತ್ತು ಇಸ್ಲಾಂ ಧರ್ಮದಲ್ಲಿ ಅಸ್ಪೃಶ್ಯತೆ ಮುಂತಾದ ದೌರ್ಜನ್ಯಗಳು ಇಲ್ಲ ಎಂಬ ಕಾರಣದಿಂದಾಗಿ ಪರಿಶಿಷ್ಟ ಜಾತಿಗೆ ಸೇರಿದ ಜನರು ಈ ಧರ್ಮಗಳಿಗೆ ಮತಾಂತರವಾಗಿದ್ದಾರೆ. ಅಲ್ಲಿ ಅವರು ಅಂತಹ ದೌರ್ಜನಕ್ಕೆ ಒಳಗಾಗುತ್ತಿಲ್ಲ. ಈ ಕಾರಣದಿಂದ ಅವರಿಗೆ ಪರಿಶಿಷ್ಟ ಜಾತಿಯ ಸ್ಥಾನಮಾನ ಮತ್ತು ಮೀಸಲಾತಿ ನೀಡಲು ಸಾಧ್ಯವಿಲ್ಲ” ಎಂದು ಸರ್ಕಾರ ಸುಪ್ರೀಂ ಕೋರ್ಟಿಗೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಹೇಳಿದೆ.
ಹಿಂದೂ, ಸಿಖ್ ಮತ್ತು ಬೌದ್ಧ ಧರ್ಮದಲ್ಲಿನ ಜನರಿಗೆ ಮಾತ್ರ ಪರಿಶಿಷ್ಟ ಸ್ಥಾನಮಾನವನ್ನು ನೀಡಲು ಸಾಧ್ಯ. ವಿದೇಶಿ ಧರ್ಮಗಳಿಗೆ ಮತಾಂತರಗೊಂಡವರಿಗೆ ಈ ಸ್ಥಾನಮಾನ ನೀಡಲು ಸಾಧ್ಯವಿಲ್ಲ ಎಂಬುದನ್ನು ಸ್ಪಷ್ಟಪಡಿಸಿದೆ.
ಅಲ್ಲದೇ ವಿದೇಶಿ ಮತಗಳಿಗೆ ಜನರು ಬೇರೆ ಬೇರೆ ಕಾರಣಗಳಿಗಾಗಿ ಮತಾಂತರವಾಗುತ್ತಿದ್ದಾರೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.